ಕೊಪ್ಪ: ‘ಸರ್ಫೇಸಿ ಕಾಯ್ದೆಯು ರೈತರನ್ನು ಸರ್ವನಾಶ ಮಾಡುವಂಥದ್ದು. ಕೇಂದ್ರ ಸರ್ಕಾರ ಎರಡು ತಿಂಗಳೊಳಗೆ ಈ ಕಾಯ್ದೆಯನ್ನು ರದ್ದುಪಡಿಸಬೇಕು’ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಾಲ ವಸೂಲಿಗಾಗಿ ಕೃಷಿ ಭೂಮಿ ಜಪ್ತಿ ಮಾಡಿ ಸರ್ಫೇಸಿ ಕಾಯ್ದೆಯಡಿ ಆನ್ಲೈನ್ ಮೂಲಕ ಮಾರಾಟ ಮಾಡುವುದನ್ನು ತಪ್ಪಿಸಬೇಕು. ಎರಡು ತಿಂಗಳೊಳಗೆ ಕಾಯ್ದೆ ರದ್ದುಪಡಿಸದಿದ್ದರೆ ಹೋರಾಟ ನಡೆಸಲಾಗುವುದು. ಕಾಫಿ ಬೆಳೆಗಾರರು ಹೋರಾಟಕ್ಕೆ ಸಿದ್ಧರಾಗಬೇಕು ಎಂದರು.

ಕಾಯ್ದೆಯಿಂದ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ ಈಗಾಗಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ರಾಜ್ಯ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದೇವೆ. ರಾಜ್ಯ ಬ್ಯಾಂಕ್ಗಳ ಸಮನ್ವಯ ಸಮಿತಿ ಅಧ್ಯಕ್ಷೆ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಒತ್ತಾಯಿಸಿದ್ದೇವೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅಡಿಕೆ ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.

ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ ಬಾಧಿಸಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಕೃಷಿ ಸಾಲ ನೀಡಲು ರೈತರ ಸಿಬಿಲ್ ಸ್ಕೋರ್ ನೋಡುವ ಪದ್ಧತಿ ರದ್ದುಪಡಿಸಬೇಕು. ಸಂಕಷ್ಟದಲ್ಲಿ ಕೃಷಿ ಕ್ಷೇತ್ರ ಇರುವುದರಿಂದ ಸಕಾಲಕ್ಕೆ ರೈತರಿಗೆ ಸಾಲ ಪಾವತಿಸಲು ಸಾಧ್ಯವಾಗುತ್ತಿಲ್ಲ. ಬದುಕಿಗಾಗಿ ಕೃಷಿ ಮಾಡುತ್ತಿರುವ ರೈತರಿಗೆ ಜಂಟಿ ಸರ್ವೆ ನಡೆಸಿ ಹಕ್ಕು ಪತ್ರ ನೀಡಬೇಕು ಎಂದರು.

ಶೃಂಗೇರಿ ಕ್ಷೇತ್ರ ರೈತ ಸಂಘದ ಅಧ್ಯಕ್ಷ ನವೀನ್ ಕರುವಾನೆ ಮಾತನಾಡಿ, ರೈತರು ದಾಖಲೆ ನೀಡಿ ಯೂರಿಯಾ ಕೊಂಡೊಯ್ಯಬೇಕಾದ ಪರಿಸ್ಥಿತಿ ಇರುವುದು ಸಮಸ್ಯೆಯಾಗುತ್ತಿದೆ. ಬೇರೆ ಕಡೆಗೂ ಮಲೆನಾಡು, ಕರಾವಳಿ ಭಾಗದ ಕೃಷಿಗೂ ವ್ಯತ್ಯಾಸ ಇರುವುದರಿಂದ ಈ ಭಾಗವನ್ನು ವಿಶೇಷ ಕೃಷಿ ವಲಯವನ್ನಾಗಿ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ರೈತ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಎಚ್. ಶಿವಕುಮಾರ್, ಜಿಲ್ಲಾ ಘಟಕದ ಕಾರ್ಯದರ್ಶಿ ಬರಡನಪುರ ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-126-1683333947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.