ಚಿಕ್ಕಮಗಳೂರು: ಖಾಸಗಿ ಶಾಲೆಗಳ ನೋಂದಣಿ ಮತ್ತು ಮಾನ್ಯತೆ ನವೀಕರಣ ವಿಷಯದಲ್ಲಿ ಅವ್ಯವಹಾರ ನಡೆದಿರುವ ಆರೋಪದ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಿಶಾ ಸಮಿತಿ ಸದಸ್ಯ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ‘2025-26ನೇ ಸಾಲಿನಲ್ಲಿ ಖಾಸಗಿ 16 ಶಾಲೆಗಳು ಆಡಳಿತ ಮಂಡಳಿಯವರ ಮಾನ್ಯತೆ ನವೀಕರಣ ಹಾಗೂ ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕೇವಲ 4 ಶಾಲೆಗಳಿಗೆ ಮಾತ್ರ ಪ್ರಥಮ ಮಾನ್ಯತೆ ನೀಡಲಾಗಿದೆ. ಉಳಿದ 12 ಶಾಲೆಗಳಿಗೆ ಮಾನ್ಯತೆ ನೀಡಿಲ್ಲ. ಒಂದೇ ಆವರಣದಲ್ಲಿ ಎರಡು ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದ್ದು, ಸೂಕ್ತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ‘ಮಾನ್ಯತೆ ನವೀಕರಣದಲ್ಲಿ ಅತ್ಯಂತ ಹೆಚ್ಚು ಭ್ರಷ್ಟಾಚಾರ ನಡೆದಿದೆ. ಕೂಡಲೇ ಈ ಬಗ್ಗೆ ಕ್ರಮ ಆಗಬೇಕು. ಇದರ ಪರಿಣಾಮವನ್ನು ಹಿಂದಿನ ಇಬ್ಬರು ಉಪನಿರ್ದೇಶಕರು ಅನುಭವಿಸಿದ್ದಾರೆ’ ಎಂದರು.

ಉತ್ತರ ನೀಡಿದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು ಮಾತನಾಡಿ, ‘ಹಿಂದಿನ ಅವಧಿಯಲ್ಲಿ ಇದು ನಡೆದಿದೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಶಿಕ್ಷಣ ನೀಡುವ ಇಲಾಖೆ ಎಲ್ಲರಿಗೂ ಮಾದರಿಯಾಗಿ ಇರಬೇಕು. ಇಲ್ಲಿ ಭ್ರಷ್ಟಾಚಾರ ಇರಲೇಬಾರದು. ಕೆಲ ಶಾಲೆಗೆ 5 ವರ್ಷಗಳ ಅನುಮತಿ, ಕೆಲವು ಶಾಲೆಗಳಿಗೆ ಒಂದೇ ವರ್ಷದ ಮಾನ್ಯತೆ ನೀಡುವುದು ಸರಿಯಲ್ಲ. ವಾರದಲ್ಲಿ ತನಿಖೆ ನಡೆಸಿ ವರದಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ‘ಕೆಲ ಖಾಸಗಿ ಆಸ್ಪತ್ರೆಗಳು ಆರೋಗ್ಯ ಶಿಬಿರದ ನೆಪದಲ್ಲಿ ಅಧಾರ್ ಕಾರ್ಡ್, ಆಯುಷ್ಮಾನ್ ಕಾರ್ಡ್ಗಳ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದೊಂದು ದಂಧೆಯಾಗಿ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು’ ಎಂದರು.

2021-22ರಲ್ಲಿ ಪಿಎಬಿ ಅನುಮೋದಿತ ಐಟಿಸಿ ತಾಂತ್ರಿಕ ಮೌಲಸೌಲಭ್ಯ ಚಟುವಟಿಕೆಯಡಿ ಜಿಲ್ಲೆಯ 13 ಸರ್ಕಾರಿ ಶಾಲೆಗಳು ಆಯ್ಕೆಯಾಗಿದೆ. ಸೌಲಭ್ಯ ನೀಡದೆ ಶೇ 90ರಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಈ ಕಡತವನ್ನು ತಡೆಹಿಡಿದು ಪರಿಶೀಲನೆ ನಡೆಸಬೇಕು ಎಂದು ದಿಶಾ ಸಮಿತಿ ಸದಸ್ಯ ಎಚ್.ಸಿ. ಕಲ್ಮರುಡಪ್ಪ ಆಗ್ರಹಿಸಿದರು.

ಜಿ.ಪಂ. ಸಿಇಒ ಎಚ್.ಎಸ್. ಕೀರ್ತನಾ ಮಾತನಾಡಿ, ಶೇ 15ರಷ್ಟು ಹಣ ಬಾಕಿ ಉಳಿಸಿ ಉಳಿದ ಹಣ ಬಿಡುಗಡೆ ಮಾಡಲಾಗಿದೆ. 15 ದಿನದಲ್ಲಿ ಅನುಷ್ಠಾನ ಮಾಡದಿದ್ದರೆ ಶೇ 15ರಷ್ಟು ಹಣ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಉತ್ತರಿಸಿದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಜೆಜೆಎಂ ಕಾಮಗಾರಿಗಳ ಬಗ್ಗೆ ಶಾಸಕರು, ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಬೇಕು. ಅಕ್ರಮ ಮಾಡಿದವರು ಎಷ್ಟೇ ದೊಡ್ಡ ವ್ಯಕ್ತಿಯಾದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತಗೆದುಕೊಳ್ಳಬೇಕು’ ಎಂದು ಹೇಳಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಡಿಪಿಆರ್ ಅವೈಜ್ಞಾನಿಕವಾಗಿದೆ. ಭದ್ರಾ ಹಿನ್ನೀರಿನಲ್ಲಿ ಜಾಕ್ವೆಲ್ ಹಾಕುವ ಬದಲು ಕಾಲುವೆಯಲ್ಲಿ ಜಾಕ್ವೆಲ್ ನಿರ್ಮಾಣ ಮಾಡಿರುವುದರಿಂದ ಕಾಮಗಾರಿ ವಿಳಂಬವಾಗಿದೆ ಎಂದರು.

ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಉಪಸ್ಥಿತರಿದ್ದರು.

ಜೆಜೆಎಂ ಕಾಮಗಾರಿ: ವಾಗ್ವಾದ

ದಿಶಾ ಸಭೆಯಲ್ಲಿ ಜೆಜೆಎಂ ಕಾಮಗಾರಿ ಚರ್ಚೆ ವೇಳೆ ಶಾಸಕ ಎಚ್.ಡಿ.ತಮ್ಮಯ್ಯ ಹಾಗೂ ದಿಶಾ ಸಮಿತಿ ಸದಸ್ಯ ಎಚ್.ಸಿ.ಕಲ್ಮರುಡಪ್ಪ ನಡುವೆ ವಾಗ್ವಾದ ನಡೆಯಿತು. ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಷ್ಟು ನೀಡಿವೆ ಎಂಬ ಮಾಹಿತಿ ನೀಡುವಂತೆ ಶಾಸಕ ಎಚ್.ಡಿ.ತಮ್ಮಯ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ಅವರನ್ನು ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಕಲ್ಮರುಡಪ್ಪ ‘ಕಾಮಗಾರಿ ಕಳಪೆಯಾಗಿದೆ. ಅನುದಾನ ತಡೆ ಹಿಡಿಯುವುದು ಸೂಕ್ತ’ ಎಂದು ತಿಳಿಸಿದರು. ಇದಕ್ಕೆ ಆಕ್ರೋಶಗೊಂಡ ಶಾಸಕ ಎಚ್.ಡಿ.ತಮ್ಮಯ್ಯ ‘ದಿಶಾ ಸಮಿತಿ ಸದಸ್ಯರಿಗೆ ಯಾವುದೇ ಅಧಿಕಾರ ಇಲ್ಲ. ಅವರು ತಮ್ಮ ಅಧಿಕಾರ ವ್ಯಾಪ್ತಿ ಎಷ್ಟು ಎಂಬುದನ್ನು ತಿಳಿದುಕೊಂಡು ಮಾತನಾಡಬೇಕು. ಕೆಲ ದಿಶಾ ಸಮಿತಿ ಸದಸ್ಯರು ಆರ್ಟಿಐ ಕಾಯ್ದೆಯಡಿ ಅರ್ಜಿ ಸಲ್ಲಿಸಿ ಏನು ಮಾಡುತ್ತಿದ್ದಾರೆ ಎಂಬುದನ್ನು ಸಭೆಯಲ್ಲಿ ಬಿಚ್ಚಿಡಬೇಕಾಗುತ್ತದೆ’ ಎಂದರು. ಕೂಡಲೇ ಮಧ್ಯ ಪ್ರವೇಶಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಸ್ಥಿತಿ ತಿಳಿಗೊಳಿಸಿದರು.

ಪಿಡಿಒಗಳಿಗೆ ಶಿಲ್ಲಾಂಗ್ ಪ್ರವಾಸ

ಸ್ವಚ್ಛ ಭಾರತ ಯೋಜನೆಯಡಿ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿಯಾಗಬೇಕಿದೆ. ಗಿರಿಭಾಗದಲ್ಲಿ ಸ್ವಚ್ಚತೆಗೆ ಶಿಲ್ಲಾಂಗ್ ಮಾದರಿಯಲ್ಲಿ ಆದ್ಯತೆ ನೀಡಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ಸಿಇಒ ಎಚ್.ಎಸ್.ಕೀರ್ತನಾ ಅವರು ಎಲ್ಲಾ ಪಿಡಿಒಗಳನ್ನು ಶಿಲ್ಲಾಂಗ್ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಪ್ರಸ್ತಾಪಿಸಿದರು. ಕೂಡಲೇ ಸಭೆಯ ಅಧ್ಯಕ್ಷರು ಸೇರಿ ಎಲ್ಲರೂ ಒಪ್ಪಿಗೆ ಸೂಚಿಸಿದರು.

‘ಮೂಡಿಗೆರೆ ರಸ್ತೆ ಭೂಸ್ವಾಧೀನ ತಿಂಗಳಲ್ಲಿ ಪೂರ್ಣಗೊಳಿಸಿ’

ಮೂಡಿಗೆರೆ–ಮೂಗ್ತಿಹಳ್ಳಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಭೂಸ್ವಾಧೀನ ತೊಡಕಾಗಿದೆ. ಒಂದು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು. 152 ರೈತರ ಜಮೀನು ಸ್ವಾಧೀನವಾಗಬೇಕಿದ್ದು ಈ ಪೈಕಿ 55 ಜನರಿಗಷ್ಟೇ ಪರಿಹಾರ ನೀಡಲಾಗಿದೆ. ರೈತರಿಂದ ದಾಖಲೆಗಳನ್ನು ಕೇಳುವ ಬದಲು ಕಂದಾಯ ಇಲಾಖೆಯಲ್ಲೇ ಇರುವ ಅವರ ದಾಖಲೆಗಳನ್ನು ಹೊಂದಿಸಿಕೊಳ್ಳಬೇಕು. ತುಮಕೂರಿನಲ್ಲಿ ರೈತರ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಪಡೆದು ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಅವರು ಈ ಕೆಲಸದ ಜವಾಬ್ದಾರಿ ತೆಗೆದುಕೊಳ್ಳಬೇಕು. ವಿವಾದಗಳಿದ್ದರೆ ನ್ಯಾಯಾಲಯದಲ್ಲಿ ಪರಿಹಾರ ಹಣ ಠೇವಣಿ ಇರಿಸಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಒಂದು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಎರಡು ತಿಂಗಳಲ್ಲಿ ಕಾಮಗಾರಿ ಆರಂಭವಾಗಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.