ಕುದುರೆಗುಂಡಿ (ನರಸಿಂಹರಾಜಪುರ): ‘ರಾಜ್ಯದಲ್ಲಿ 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಪ್ರತಿ ಗ್ರಾಮ ಪಂಚಾಯಿತಿಗೊಂದು ಕೆಪಿಎಸ್ ಶಾಲೆ ನೀಡಲು ತೀರ್ಮಾನಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಗಡಿಭಾಗದ ಕುದುರೆಗುಂಡಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು ಮಾಡಿದ್ದಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸರ್ಕಾರಿ ಪ್ರೌಢಶಾಲೆ, ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಗ್ರಾಮಸ್ಥರು ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 2008ರಲ್ಲಿ 308 ಕೆಪಿಎಸ್ ಶಾಲೆಗಳಿದ್ದವು. ಬಜೆಟ್ನಲ್ಲಿ 500 ಕೆಪಿಎಸ್ ಶಾಲೆ ಮಂಜೂರು ಮಾಡುವುದಾಗಿ ಘೋಷಿಸಲಾಗಿತ್ತು. ಕಳೆದ ಐದಾರು ತಿಂಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ 200 ಹಾಗೂ ಅಲ್ಪಸಂಖ್ಯಾತರಿಗೆ 100 ಕೆಪಿಎಸ್ ಮಂಜೂರು ಮಾಡಲಾಗಿದೆ. ಪ್ರಸ್ತುತ 900 ಕೆಪಿಎಸ್ ಶಾಲೆಗಳು ಮಂಜೂರಾಗಿದ್ದು, ಪ್ರತಿ ಶಾಲೆಗೆ ₹4 ಕೋಟಿಯಂತೆ ಒಟ್ಟು ₹3 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಪ್ರತಿಯೊಂದು ಶಾಲೆಯ ಅವಶ್ಯಕತೆಗೆ ತಕ್ಕಂತೆ ಕ್ರಿಯಾಯೋಜನೆ ರೂಪಿಸಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಶಿಕ್ಷಕರ ಅರ್ಹತೆ ಪರೀಕ್ಷೆ ಟಿಇಟಿ ಕೆಲವೇ ದಿನಗಳಲ್ಲಿ ನಡೆಯಲಿದ್ದು, ಇದು ಮುಗಿದ ಕೂಡಲೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿ ಜೂನ್ 1ರೊಳಗೆ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಲಾಗುವುದು. ಇದರೊಂದಿಗೆ ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ನೇಮಕಾತಿಗೂ ಕ್ರಮಕೈಗೊಳ್ಳಲಾಗಿದೆ. ಜನವರಿ ಅಂತ್ಯದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ರಾಜ್ಯದ ಎಲ್ಲಾ ಕೆಪಿಎಸ್ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಶಿಕ್ಷಣದ ಗ್ಯಾರಂಟಿಯನ್ನೂ ಸರ್ಕಾರ ನೀಡುತ್ತಿದ್ದು, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಒಂದೇ ರೀತಿಯ ಶಿಕ್ಷಣ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುತ್ತಿದ್ದಾರೆ. ಖಾಸಗಿ ಶಾಲೆಗಳಿಂತಲೂ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ. ಶೃಂಗೇರಿ ಕ್ಷೇತ್ರಕ್ಕೆ 3 ಕೆಪಿಎಸ್ ಶಾಲೆಗಳು ಮಂಜೂರಾಗಿದ್ದು ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣವಾಗಲಿವೆ ಎಂದರು.

ಕುದುರೆಗುಂಡಿ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನುಗ್ಗಿ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪಾಪಣ್ಣ, ದಿನೇಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಹೇಮಂತ್ ಪೂಜಾರಿ, ಅಂಬಿಕಾ, ಕವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲಿಂಗರಾಜು, ಕೊಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಪಿ. ರಮೇಶ್, ಎಚ್.ಇ. ದಿವಾಕರ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ. ನಾರಾಯಣಸ್ವಾಮಿ, ಸುದೀಪ್ ಹೆಗ್ಡೆ, ದೀಪಕ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಧನಂಜಯ ಮೇಧೂರ, ಸಹ ಶಿಕ್ಷಕ ಪ್ರಕಾಶ್, ಉಷಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಡಿಕಾಸ್ಟ ಇದ್ದರು.

ಶಿಕ್ಷಣದಲ್ಲಿ ಸಾಧನೆ ಮಾಡಿದ ಶುತಸೇನಗೌಡ, ಪ್ರಮೋದ್, ಸುಹಾಸ್ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.