ಬಾಳೆಹೊನ್ನೂರು: ಕೆಆರ್ಇಡಿಎಲ್ ಕಳೆದ ಎರಡು ವರ್ಷಗಳಿಂದ ನಿರಂತವಾಗಿ ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ದೇಶಕ್ಕೆ ಮೊದಲ ಸ್ಥಾನವನ್ನು ಪಡೆದಿದೆ. ಕಳೆದ ವರ್ಷ ನಿಗಮವು ತನ್ನ ಲಾಭಾಂಶದಲ್ಲಿ ಶೇ 2ರಷ್ಟು ಅಂದರೆ ₹ 2 ಕೋಟಿ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸಿತ್ತು. ಈ ವರ್ಷ ₹ 4.5 ಕೋಟಿ ಲಾಭಾಂಶ ಹಣವನ್ನು ವಿವಿಧ ಕ್ಷೇತ್ರಕ್ಕೆ ನೀಡಲಾಗಿದೆ ಎಂದು ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಲಾಭಾಂಶವನ್ನು (ಸಿಎಸ್ಆರ್) ವಿವಿಧ ಸಂಘ ಸಂಸ್ಥೆಗಳಿಗೆ ಚೆಕ್ ಮೂಲಕ ಹಸ್ತಾಂತರಿಸಿ ಮಾತನಾಡಿದ ಅವರು, ಪ್ರಮುಖವಾಗಿ ಶಾಲೆ, ಕಾಲೇಜು ಅಭಿವೃದ್ಧಿ, ವಿವಿಧ ಸಂಘ ಸಂಸ್ಥೆಗಳ ಕಾರ್ಯಗಳಿಗೆ, ಶೌಚಾಲಯ, ಆಟದ ಮೈದಾನ ನಿರ್ಮಾಣ, ಅರಣ್ಯ ಇಲಾಖೆಯ ಕಾಡಾನೆ ಹಾವಳಿ ನಿಯಂತ್ರಣಕ್ಕೆ ವಾಹನ ಖರೀದಿಗೆ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ, ಮೂಲಭೂತ ಸೌಕರ್ಯಗಳಿಗೆ ನೀಡಲಾಗಿದೆ ಎಂದರು.

ಸಂಸ್ಥೆಯ ಲಾಭಾಂಶದಲ್ಲಿ ಕಳೆದ ವರ್ಷ ₹72 ಕೋಟಿಯನ್ನು ಸರ್ಕಾರಕ್ಕೆ ನೀಡಲಾಗಿದೆ.ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹5 ಕೋಟಿ ಕೊಡಲಾಗಿದೆ. ಪ್ರಸಕ್ತ ವರ್ಷ ₹64 ಕೋಟಿ ಲಾಭಾಂಶವನ್ನು ಸರ್ಕಾರಕ್ಕೆ, ₹ 5 ಕೋಟಿ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿದೆ ಎಂದು ವಿವರಿಸಿದರು.

ನವೀಕರಿಸಬಹುದಾದ ಇಂಧನ ನಿಗಮವನ್ನು ಸರ್ಕಾರ ಷೇರು ಹಣ ಹಾಕಿ ಆರಂಭಿಸಿದ್ದು, ಸರ್ಕಾರದಿಂದ ಇದಕ್ಕೆ ಯಾವುದೇ ಅನುದಾನಗಳು ದೊರೆಯಲ್ಲ. ನಿಗಮವೇ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸಿ ಲಾಭಾಂಶ ಕಂಡುಕೊಂಡು ವಿವಿಧ ಸತ್ಕಾರ್ಯಕ್ಕೆ ವಿನಿಯೋಗಿಸಲಾಗುತ್ತಿದೆ ಎಂದು ತಿಳಿಸಿದರು.

ಸಂಸ್ಥೆಯ ಆದಾಯವನ್ನು ಮುಂದಿನ ಎರಡು ವರ್ಷದಲ್ಲಿ ದ್ವಿಗುಣಗೊಳಿಸುವ ಕಾರ್ಯಯೋಜನೆ ನಮ್ಮ ಮುಂದಿದ್ದು, ಮುಂದಿನ ವರ್ಷಗಳಲ್ಲಿ ₹ 100 ಕೋಟಿಗೂ ಅಧಿಕ ಲಾಭಾಂಶ ಗಳಿಸಿ, ಅದರಲ್ಲಿ ₹25 ಕೋಟಿಯಷ್ಟು ಲಾಭಾಂಶವನ್ನು ಸಾಮಾಜಿಕ ಚಟುವಟಿಕೆಗಳಿಗೆ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

ನವೀಕರಿಸಬಹುದಾದ ಇಂಧನ ನಿಗಮದ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.