ಶನಿವಾರ, ಮಾರ್ಚ್ 25, 2023
22 °C

ಸಿದ್ದರಾಮಯ್ಯ ವಿರುದ್ಧ ಸಿ.ಟಿ. ರವಿ ಟ್ವೀಟ್ ಖಂಡಿಸಿ ಕುರುಬ ಸಂಘದಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಸಿ.ಟಿ.ರವಿ ಅವರು ' ಈ ಟೋಪಿ ಹಾಕಲು ಯಾರಿಗೆ ಹುಟ್ಟಿರಬೇಕು' ಎಂದು ಟ್ವೀಟ್ ಮಾಡಿರುವುದನ್ನು ವಿರೋಧಿಸಿ ಕುರುಬರ ಸಂಘದವರು ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ರವಿ ಅವಹೇಳನಕಾರಿ ಟ್ವೀಟ್ ಮಾಡಿದ್ದಾರೆ, ಅವರು ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರವಿ ವಿರುದ್ಧ ಘೋಷಣೆ ಕೂಗಿದರು.

ಗಾಯತ್ರಿ ಶಾಂತೇಗೌಡ, ಎ.ಎನ್. ಮಹೇಶ್, ಮಂಜೇಗೌಡ, ಇತರರು ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು