ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರ್ಮಾಡಿ ಘಾಟ್‌ನಲ್ಲಿ ಧರೆ ಕುಸಿತ

Published 24 ಜುಲೈ 2023, 13:15 IST
Last Updated 24 ಜುಲೈ 2023, 13:15 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್‌ನ ಬಿದಿರುತಳ ಹಾಗೂ ಆಲೇಕಾನ್ ಮಾರ್ಗ ಮಧ್ಯೆ ಗುಡ್ಡ ಕುಸಿತ ಉಂಟಾಗಿ ಸೋಮವಾರ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.

ಕೆಲವು ದಿನಗಳಿಂದ ಈ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡದ ಮಣ್ಣು ಕುಸಿತವಾಗಿ ರಸ್ತೆಗೆ ಬಂದು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಇದರಿಂದ ಕೆಲವು ಹೊತ್ತು ಘಾಟ್‌ ಪ್ರದೇಶದಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಈ ಗುಡ್ಡ ಕುಸಿತದ ಬಲಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಇಲ್ಲಿ ತೀವ್ರ ಕಿರಿದಾಗಿದೆ. ಇದರಿಂದ ಕಿರಿದಾದ ರಸ್ತೆಯಲ್ಲಿ ಒಂದೊಂದಾಗಿ ವಾಹನ ಸಂಚರಿಸಬೇಕಾ ಗಿದ್ದರಿಂದ ಸೋಮವಾರ ಗಂಟೆಗೂ ಅಧಿಕ ಕಾಲ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು.

ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವತಿಯಿಂದ ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ‘ವಿಪರೀತ ಮಳೆಯ ಸಂದರ್ಭದಲ್ಲಿ ವಾಹನ ಸವಾರರು ಚಾರ್ಮಾಡಿಯಲ್ಲಿ ವಾಹನವನ್ನು ಎಚ್ಚರಿಕೆಯಿಂದ ಮುನ್ನಡೆಸಬೇಕು. ರಾತ್ರಿ ಹೊತ್ತಲ್ಲಿ ಚಾರ್ಮಾಡಿ ಘಾಟ್‌ ಭಾಗದಲ್ಲಿ ಮಂಜು ಮುಸುಕಿದ ವಾತಾವರಣ ಇರುವುದರಿಂದ ಪ್ರವಾಸಿಗರು ಎಚ್ಚರ ವಹಿಸಬೇಕು’ ಎಂದು ಮುಖಂಡ ಬಿ.ಎಂ.ರಶೀದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT