ಮೂಡಿಗೆರೆ ತಾಲ್ಲೂಕಿನ ಬಲಿಗೆ ಗ್ರಾಮದಲ್ಲಿ ಧರೆ ಕುಸಿತಗೊಂಡಿರುವುದು
ಮೂಡಿಗೆರೆ: ತಾಲ್ಲೂಕಿನ ಸುಂಕಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಲಿಗೆ ಗ್ರಾಮದಲ್ಲಿ ಭಾರಿ ಮಳೆಗೆ ಧರೆ ಕುಸಿತವಾಗಿದ್ದು, ಅಲ್ಲಿನ 5 ಕುಟುಂಬಗಳನ್ನು ತಾಲ್ಲೂಕು ಆಡಳಿತ ಸ್ಥಳಾಂತರ ಮಾಡಿದೆ.
ADVERTISEMENT
ADVERTISEMENT
ಮನೆಯ ಹಿಂಭಾಗದ ಗುಡ್ಡದಿಂದ ಮಣ್ಣು ಜರಿದಿದ್ದು, ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಕೆಳಭಾಗದಲ್ಲಿರುವ ಕುಟುಂಬಗಳನ್ನು ಸ್ಥಳಾಂತರ ಮಾಡಿದೆ.
ಬಲಿಗೆ ಗ್ರಾಮದಲ್ಲಿನ ಶಾಲೆ, ಅಂಗನವಾಡಿ ಹಾಗೂ ಸಮುದಾಯದ ಭವನದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಅಗತ್ಯ ವಸ್ತುಗಳನ್ನು ದೊರಕಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.