ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಂವಹನದಿಂದ ಭಾಷಾ ಬೆಳವಣಿಗೆ ಸಾಧ್ಯ: ಎಸ್.ವಿಶ್ವನಾಥ್

Last Updated 2 ನವೆಂಬರ್ 2022, 8:25 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಕನ್ನಡನಾಡಿಗೆ ಹೊರರಾಜ್ಯದಿಂದ ಬಂದವರಿಗೂ ಕನ್ನಡವನ್ನು ಕಲಿಸುವ ಕೆಲಸ ಮಾಡಬೇಕು ಎಂದು ತಹಶೀಲ್ದಾರ್ ಎಸ್.ವಿಶ್ವನಾಥ್ ತಿಳಿಸಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ
ಮಂಗಳವಾರ ನಡೆದ 67ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಸಂದೇಶ ನೀಡಿದರು.

ಕನ್ನಡ ಭಾಷಿಗರನ್ನು ಒಗ್ಗೂಡಿಸಿ ಕನ್ನಡ ನಾಡನ್ನು ಕಟ್ಟುವಲ್ಲಿ ಮಹನೀಯರ ಪಾತ್ರ ಪ್ರಮುಖವಾಗಿದೆ. ಪ್ರತಿನಿತ್ಯ ಕನ್ನಡದಲ್ಲಿ ಮಾತನಾಡುವ, ಬರೆಯುವ, ಓದುವ ಕೆಲಸ ಮಾಡಿದರೆ ಕನ್ನಡ ಉಳಿಯಲು ಸಾಧ್ಯ ಎಂದರು.

ಸಮಾರಂಭಕ್ಕೆ ಚಾಲನೆ ನೀಡಿದ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ‘ಕನ್ನಡ ಪುರಾತನ ಪ್ರಿಯವಾದ ಭಾಷೆಯಾಗಿದೆ. ಕನ್ನಡಕ್ಕೆ 8 ಜ್ಞಾನ ಪೀಠ ಪ್ರಶಸ್ತಿಗಳು ಲಭಿಸಿದೆ. ಕನ್ನಡ ಆಡಳಿತ ಭಾಷೆಯಾಗಿ ಸಂಪೂರ್ಣವಾಗಿ ಜಾರಿಗೊಳಿಸಲು ಸರ್ಕಾರ ಪ್ರಯತ್ನಿಸಬೇಕು. ಕನ್ನಡ ನಾಡಿನ ಭಾಷೆ, ಕಲೆ, ಸಂಸ್ಕೃತಿಯನ್ನು ಪೋಷಿಸಬೇಕು. ಕನ್ನಡದಲ್ಲಿಯೇ ವ್ಯವಹಾರ ಮಾಡಬೇಕು’ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಕನ್ನಡ ಧ್ವಜಾರೋಹಣ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ. ಕಾಂತರಾಜ್ ಮಾತನಾಡಿದರು. ಡಿಸಿಎಂಸಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಧುರಾ ಮಂಜುನಾಥ್ ಉಪನ್ಯಾಸ ನೀಡಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಉಮಾ, ಸದಸ್ಯರಾದ ಸುರಯ್ಯಬಾನು, ಮುಕುಂದ, ಸೈಯದ್ ವಸೀಂ, ಮುನಾವರ್ ಪಾಷ, ಇಒ ಎಸ್.ನಯನಾ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಧನಂಜಯ ಮೇಧೂರ, ಸಿಡಿಪಿಒ ನಿರಂಜನ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಾ ನಂಜುಂಡಸ್ವಾಮಿ, ಮುಖಂಡರಾದ ಶಿವಣ್ಣ, ರಾಮು, ವಾಲ್ಮೀಕಿ ಶ್ರೀನಿವಾಸ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಶಿಕ್ಷಕಿಯರಾದ ಶಿಲ್ಪಾ, ಮಂಜುಶ್ರೀ, ಸುರೇಶ್ ಬಸಂತಪುರ ಇದ್ದರು.

ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡದಲ್ಲಿ 125 ಕ್ಕೆ125 ಅಂಕ ಪಡೆದ 27 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ಮಧುರಾ ಮಂಜುನಾಥ್ ಹಾಗೂ ವಿಜಯಕುಮಾರ್ ಅವರಿಗೆ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಿಸಿಎಂಸಿ, ಮೌಲಾನಾ ಅಜಾದ್ ಶಾಲೆ, ಸ್ಪಂದನ ಶಾಲೆ ಹಾಗೂ ಕೆಪಿಎಸ್‌ಸಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕನ್ನಡ ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ, ಶಾಶ್ವತಿ ಮಹಿಳಾ ಸಂಘದ ಸದಸ್ಯರು ಕನ್ನಡ ಹಾಡುಗಳನ್ನು ಹಾಡಿ ದರು. ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಹಾಗೂ ಆಟೊ ಚಾಲಕರ ಸಂಘದವರು ಮೆರವಣಿಗೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT