ತರೀಕೆರೆ (ಚಿಕ್ಕಮಗಳೂರು): ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಮಗುವನ್ನು ಚಿರತೆ ಹೊತ್ತೊಯ್ದಿದೆ.

ತೋಟದ ಮನೆಯ ಕೆಲಸಗಾರ ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿಯನ್ನು ಚಿರತೆ ಗುರುವಾರ ಸಂಜೆ 6 ಗಂಟೆಯ ಸುಮಾರಿಗೆ ಹೊತ್ತೊಯ್ದಿದೆ.

ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದೆ. ಪಕ್ಕದಲ್ಲೇ ಇದ್ದ ತಂದೆ ಹಿಂದೆ ಓಡಿ ಹೋಗಿದ್ದು, ಚಿರತೆ ಮಗುವಿನೊಂದಿಗೆ ನಾಪತ್ತೆಯಾಗಿದೆ.

ಸ್ಥಳಕ್ಕೆ ಬೀರೂರು ಠಾಣೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು, ಮಗುವಿಗಾಗಿ ಶೋಧ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.