ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ–ಜೆಡಿಎಸ್ ಮುಖಂಡರ ಸಮನ್ವಯ ಸಭೆ

ಲೋಕಸಭೆ ಚುನಾವಣೆ: ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲ್ಲಿಸಲು ರಣತಂತ್ರ
Published 27 ಮಾರ್ಚ್ 2024, 22:13 IST
Last Updated 27 ಮಾರ್ಚ್ 2024, 22:13 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಮೈತ್ರಿ ಹಿನ್ನೆಲೆ ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಸಮನ್ವಯ ಸಭೆ ನಡೆಸಿದರು.

ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಲು ರೂಪಿಸಬೇಕಾದ ಕಾರ್ಯತಂತ್ರಗಳು, ಪ್ರಚಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

ಬಿಜೆಪಿ ಮುಖಂಡ ಸಿ.ಟಿ. ರವಿ ಮಾತನಾಡಿ, ‘ಜಂಟಿ ಸಭೆಯಲ್ಲಿ ಚುನಾವಣೆ ಎದುರಿಸಲು ಕೈಗೊಳ್ಳಬೇಕಾದ ರೂಪರೇಷೆ, ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿ ತೀಮಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಜೆಡಿಎಸ್ ಮುಖಂಡ ಎಸ್‌.ಎಲ್‌.ಭೋಜೇಗೌಡ ಮಾತನಾಡಿ, ‘ಪಕ್ಷದ ವರಿಷ್ಠರ ಸೂಚನೆಯಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರೊಂದಿಗೆ ಸಮನ್ವಯ ಸಭೆ ನಡೆಸಲಾಗಿದೆ. ಕಾರ್ಯಕರ್ತರು ಒಂದುಗೂಡಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದರು.

ಮೈತ್ರಿ ಧರ್ಮದಂತೆ ಎರಡೂ ಪಕ್ಷಗಳು ಪರಸ್ಪರ ಗೌರವ ಸಮಭಾವದಿಂದ ಕಾಣಬೇಕು. ಲೋಕಸಭೆ ಅಭ್ಯರ್ಥಿ ಗೆಲ್ಲಿಸುವ ಗುರಿ ಹೊಂದಿ ಪ್ರತಿ ತಾಲ್ಲೂಕು ಮತ್ತು ಬೂತ್‌ ಮಟ್ಟದಲ್ಲಿ ದೇಶದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಜೆಡಿಎಸ್‌ನ ಸುಧಾಕರ ಶೆಟ್ಟಿ ಹೇಳಿದರು.

ಸಭೆಯಲ್ಲಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಡಿ.ಎನ್‌. ಜೀವರಾಜ್‌, ಎಚ್‌.ಸಿ.ಕಲ್ಮರುಡಪ್ಪ, ದೀಪಕ್‌ ದೊಡ್ಡಯ್ಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಶೆಟ್ಟಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜನ್‌ ಅಜಿತ್‌ಕುಮಾರ್, ದೇವಿ ಪ್ರಸಾದ್, ಕುಮಾರಗೌಡ, ಶಿವಾನಂದ್‌, ರವೀಂದ್ರ ಬೆಳವಾಡಿ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT