ಮಂಗಳವಾರ, ಡಿಸೆಂಬರ್ 1, 2020
26 °C

‘ಲವ್‌ ಜಿಹಾದ್‌ ಭಯೋತ್ಪಾದನೆಯ ಮತ್ತೊಂದು ಮುಖ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ‘ಲವ್‌ ಜಿಹಾದ್‌ ಭಯೋತ್ಪಾದನೆಯ ಮತ್ತೊಂದು ಮುಖ. ಅದರ ಹೆಸರಿನಲ್ಲಿ ಮತಾಂತರ ನಡೆಯುತ್ತಿದೆ. ಇದು ದೇಶದಲ್ಲಿ ಒಂದು ಕೋಮಿನ ಜನಸಂಖ್ಯೆ ಹೆಚ್ಚಿಸುವ ವ್ಯವಸ್ಥಿತ ಷಡ್ಯಂತ್ರ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಕರಾವಳಿ ಸಹಿತ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಇಂಥ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ, ಲವ್‌ ಜಿಹಾದ್‌ ತಡೆ, ಮತಾಂತರ ನಿಷೇಧ ಕಾಯ್ದೆ ತರುವ ಅಗತ್ಯ ಇದೆ. ಲವ್‌ ಜಿಹಾದ್‌ ಹೆಸರಿನಲ್ಲಿ ಮೋಸ ಮಾಡುವವರಿಗೆ ಕಠಿಣ ಶಿಕ್ಷೆ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.