ಕೊಪ್ಪ: ಹಿರೇಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಲಕೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ 169ರ ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣ ಗಿಡಗಂಟಿಗಳಿಂದ ಆವೃತಗೊಂಡಿದ್ದು, ನಿರ್ವಹಣೆಯಿಲ್ಲದೆ ಸೊರಗಿದೆ.

ಈ ಭಾಗದಲ್ಲಿ ನೂರಾರು ಮಂದಿ ಬಸ್ ನಿಲ್ದಾಣವನ್ನು ಬಳಸುತ್ತಾರೆ. ಆದರೆ, ನಿರ್ವಹಣೆ ಕೊರತೆಯಿಂದ ಬಸ್ ನಿಲ್ದಾಣದ ಬದಲು ಮೋರಿ ಕಟ್ಟೆ ಮೇಲೆ ಕುಳಿತು ಬಸ್ಗಾಗಿ ಕಾಯುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗಿದೆ. ಇದೀಗ ಮಳೆ ಶುರುವಾಗಿದ್ದು, ಕಳೆ ಗಿಡಗಳನ್ನು ತೆರವುಗೊಳಿಸದಿದ್ದರೆ ಜನರಿಗೆ ಸಮಸ್ಯೆಯಾಗಲಿದೆ.

ಬಸ್ ತಂಗುದಾಣವನ್ನು 2019- 20ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ದುರಸ್ತಿಪಡಿಸಲಾಗಿದೆ. ಆ ಬಳಿಕ ಇಲ್ಲಿ ಸ್ವಚ್ಛತೆ ಕೆಲಸ ಮಾಡದೇ ಪಾಳು ಬಿಡುವಂತಾಗಿದೆ. ಸಂಬಂಧಿಸಿದ ಸ್ಥಳೀಯ ಪಂಚಾಯಿತಿ ಈ ಬಗ್ಗೆ ಗಮನ ಹರಿಸಿ, ಗಿಡಗಂಟಿಗಳ ತೆರವಿಗೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-126-614123213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.