ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ: ಮದ್ರಾಸ್ ಐ ಕಾಟ, 184 ವಿದ್ಯಾರ್ಥಿಗಳಲ್ಲಿ ಸೋಂಕು

Published 23 ಜುಲೈ 2023, 13:58 IST
Last Updated 23 ಜುಲೈ 2023, 13:58 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನಲ್ಲಿ ಮದ್ರಾಸ್ ಐ (ಕೆಂಗಣ್ಣು) ಸೋಂಕು ವೇಗವಾಗಿ ಹರಡುತ್ತಿದ್ದು, ಈಗಾಗಲೇ ತಾಲ್ಲೂಕಿನ 184 ವಿದ್ಯಾರ್ಥಿಗಳನ್ನು ಬಾಧಿಸಿದೆ.

ಏಳೆಂಟು ದಿನದ ಹಿಂದೆ ಈ ಸೋಂಕು ತಾಲ್ಲೂಕಿನ ಕೆಲ ವಿದ್ಯಾರ್ಥಿನಿಲಯಗಳಲ್ಲಿ ಕಾಣಿಸಿಕೊಂಡಿದೆ. ಪಟ್ಟಣದ ಪ್ರಿಮೆಟ್ರಿಕ್ ಬಾಲಕರ ಹಾಸ್ಟೆಲ್‍ನ 125 ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿದೆ. ಕೂಡಲೇ ಹಾಸ್ಟೆಲ್ ವಾರ್ಡನ್ ಎಚ್ಚೆತ್ತುಕೊಂಡು ಮೇಲಧಿಕಾರಿಗಳ ಗಮನಕ್ಕೆ ತರುವ ಮೂಲಕ ಸೂಕ್ತ ಚಿಕಿತ್ಸೆ ನೀಡಿದ್ದರಿಂದ ವಿದ್ಯಾರ್ಥಿಗಳು ಗುಣಮಖರಾಗಿದ್ದಾರೆ.

ಬಿದರಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ 450 ಮಕ್ಕಳ ಪೈಕಿ 164 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಗುಣಮುಖರಾಗುತ್ತಿದ್ದಾರೆ. ಸೋಂಕು ಹರಡುವುದು ಹೆಚ್ಚಾಗುತ್ತಿದ್ದಂತೆ ಪೋಷಕರಿಗೆ ಮಾಹಿತಿ ನೀಡಿದ್ದು, ಕೆಲ ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ. ಸೋಂಕಿತ ವಿದ್ಯಾರ್ಥಿಗಳಿಗೆ ಕಣ್ಣಿನ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ಗೋಪಾಲಕೃಷ್ಣ ಹಾಗೂ ಡಿಎಚ್‍ಒ ಕಚೇರಿಯಿಂದ ವೈದ್ಯರು ಬಂದು ಪರಿಶೀಲಿಸಿದ್ದಾರೆ.

‘ಮದ್ರಾಸ್ ಐ ಸೋಂಕು ಬಗ್ಗೆ ಭಯ ಬೇಡ. ಒಮ್ಮೆ ಸೋಂಕು ಹರಡಿದರೆ ನಾಲ್ಕೈದು ದಿನದಲ್ಲಿ ಗುಣವಾಗುತ್ತದೆ. ಈಗಾಗಲೇ ತಾಲ್ಲೂಕಿನಲ್ಲಿ 184 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿನಿತ್ಯ ವೈದ್ಯಾಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ವಚ್ಛತೆ ಕಾಪಾಡಿಕೊಂಡರೆ ಸೋಂಕು ಹರಡುವುದನ್ನು ತಡೆಯಬಹುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಂದರೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT