ದಾನಿಗಳ ಸಹಕಾರದಿಂದ ಶಾಲೆಗೆ ಬರುವ ಮಕ್ಕಳಿಗೆ ಯಾವ ಕೊರತೆಯೂ ಆಗದಂತೆ ನೋಡಿಕೊಳ್ಳುವ ಕೆಲಸವನ್ನು ಸಮಿತಿ ಮಾಡುತ್ತಿದೆ. ಶಿಕ್ಷಕರಿಂದಲೂ ಉತ್ತಮ ಸಹಕಾರ ದೊರೆಯುತ್ತಿದ್ದು ಪ್ರಶಸ್ತಿ ಬರಲು ಸಾಧ್ಯವಾಯಿತು
ಮುಳ್ಳೇಶ್ ಎಸ್‌ಡಿಎಂಸಿ ಅಧ್ಯಕ್ಷ
ಎಲ್ಲೇ ಇದ್ದರೂ ನಮಗೆ ಶಾಲೆಯ ಅಭಿವೃದ್ಧಿ ಬಗ್ಗೆಯೇ ಆಲೋಚನೆ ಇರುತ್ತದೆ. ಶಾಲೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವ ಉದ್ದೇಶ ಇದೆ. ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದೇವೆ
ಎಂ.ಸಿ.ಅನುರಾಜೇಗೌಡ ಎಸ್‌ಡಿಎಂಸಿ ಸದಸ್ಯ
ಎಸ್‌ಡಿಎಂಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳ ಕಲಿಕೆಗೆ ಬೇಕಿರುವ ಎಲ್ಲಾ ಸೌಕರ್ಯ ಕಲ್ಪಿಸಲಾಗಿದೆ. ಆಂಗ್ಲ ಮಾದ್ಯಮ ಆರಂಭಿಸಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ