ಜಿಲ್ಲಾಸ್ಪತ್ರೆ ಮೇಲ್ದರ್ಜೇಗೇರಿಸಲು ಪ್ರಾಮಾಣಿಕ ಯತ್ನ: ಸಚಿವ

7

ಜಿಲ್ಲಾಸ್ಪತ್ರೆ ಮೇಲ್ದರ್ಜೇಗೇರಿಸಲು ಪ್ರಾಮಾಣಿಕ ಯತ್ನ: ಸಚಿವ

Published:
Updated:

ಚಿಕ್ಕಮಗಳೂರು: ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಜಿಲ್ಲಾಸ್ಪತ್ರೆ ಮೇಲ್ದರ್ಜೇಗೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಇಲ್ಲಿ ಬುಧವಾರ ತಿಳಿಸಿದರು.

ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಕ್ರಮ ವಹಿಸಲು ಪ್ರಯತ್ನಿಸುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳದರು.

ಟಿಂಬರ್‌ ಲಾರಿಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿವೆ ಎಂದು ಬಹಳಷ್ಟು ಮಂದಿ ಹೇಳಿದ್ದಾರೆ. ಮಳೆಗಾಲದಲ್ಲಿ ಟಿಂಬರ್‌ ಲಾರಿಗಳ ಸಂಚಾರಕ್ಕೆ ನಿರ್ಬಂಧ ಹಾಕಬೇಕು. ಉಲ್ಲಂಘಿಸಿದರೆ ಕ್ರಮ ಜರುಗಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಿ ಜಿಲ್ಲೆಯ ಅತಿವೃಷ್ಟಿ ಹಾನಿಗೆ ವಿಶೇಷ ಪ್ಯಾಕೇಜ್‌ಗೆ ಕೋರಿಕೆ ಸಲ್ಲಿಸುತ್ತೇವೆ. ಒಳಚರಂಡಿ ಕಾಮಗಾರಿಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿ ಕಳಪೆಯಾಗಿದ್ದರೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತರುತ್ತೇನೆ. ಅತಿವೃಷ್ಟಿ ಕಾಫಿ ಬೆಳೆ ನಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ಕಾಫಿ ಮಂಡಳಿ ಅಧ್ಯಕ್ಷರು ಗಮನಹರಿಸಬೇಕು. ಇದೇ ಜಿಲ್ಲೆಯವರು ಮಂಡಳಿ ಅಧ್ಯಕ್ಷರಾಗಿದ್ದಾರೆ, ಅವರು ಅಧಿಕಾರ ಚಲಾಯಿಸಬೇಕು ಎಂದು ಪ್ರತಿಕ್ರಿಯಿಸಿದರು.

ಕಳಸದಿಂದ ಹೊರನಾಡು ಸಂಪರ್ಕಿಸುವ ಹಬ್ಬಾಳೆ ಸೇತುವೆ ಈ ಬಾರಿ ಮಳೆಯಿಂದಾಗಿ ಹಲವು ಬಾರಿ ಮುಳುಗಡೆಯಾಗಿದೆ. ಈ ಬಗ್ಗೆ ಪರಿಶೀಲಿಸಲಾಗಿದೆ. ಸೇತುವೆ ಎತ್ತರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಮಳೆಗಾಲ ಮುಗಿದ ನಂತರ ಕಾಮಗಾರಿ ಮಾಡಲಾಗುವುದು. ಪ್ರಕೃತಿ ವಿಕೋಪದಲ್ಲಿ ಹಾನಿಯಾದ ಮನೆಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದೆ. ಶೇ 75ಕ್ಕಿಂತ ಹೆಚ್ಚಿಗೆ ಹಾನಿಯ ಮನೆಗಳಿಗ ₹ 90,000 ಪರಿಹಾರ ನೀಡಲು ಅವಕಾಶ ಇದೆ ಎಂದು ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಉತ್ತರಿಸಿದರು.

ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದ ಕೆರೆಗಳನ್ನು ತುಂಬಿಸುವ ನಿಟ್ಟಿನಲ್ಲಿ ಎರಡು ಯೋಜನೆಗಳ ಪ್ರಸ್ತಾವ ಸಿದ್ಧವಾಗಿದೆ. ಹೆಬ್ಬೆಯಿಂದ ನೀರು ತರುವ ₹ 162 ಕೋಟಿ ಹಾಗೂ ಭದ್ರಾ ಮೇಲ್ದಂಡೆಯಿಂದ ₹ 657 ಕೋಟಿ ಅಂದಾಜು ಪಟ್ಟಿ ತಯಾರಿಯಾಗಿದೆ ಎಂದು ಪ್ರತಿಕ್ರಿಯಿಸಿದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !