ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್‌ ಅಮಾನ್ಯ ಪ್ರಕರಣ: ಮಾಳವಿಕಾ ಹೆಗ್ಡೆಗೆ ಜಾಮೀನು 

Last Updated 7 ನವೆಂಬರ್ 2020, 11:35 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕಾಫಿ ಖರೀದಿಸಿದ ಚೆಕ್‌ ಅಮಾನ್ಯ (ಬೌನ್ಸ್‌) ಪ್ರಕರಣದಲ್ಲಿ ಕಾಫಿ ಡೇ ಗ್ಲೋಬಲ್‌ ಲಿಮಿಟೆಡ್‌ ನಿರ್ದೇಶಕಿ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‌ಸಿ ಕೋರ್ಟ್‌ ಜಾಮೀನು ನೀಡಿದೆ.

‘ನೆಗೊಷಿಯಬಲ್‌ ಇನ್‌ಸ್ಟ್ರುಮೆಂಟ್‌ ಕಾಯ್ದೆ–138’ನಡಿ ಮಾಳವಿಕಾ ಸಹಿತ ಎಂಟು ಮಂದಿ ವಿರುದ್ಧ ದೂರು ದಾಖಲಾಗಿದೆ. ಕೋರ್ಟ್‌ ಅ.6ರಂದು ಎಂಟು ಮಂದಿಗೂ ಜಾಮೀನುರಹಿತ ಬಂಧನ ಆದೇಶ ಹೊರಡಿಸಿತ್ತು.

ಮಾಳವಿಕಾ ಅವರು ಕೋರ್ಟ್‌ಗೆ ಹಾಜರಾಗಿದ್ದರು. ಜಾಮೀನು ಸಿಕ್ಕಿದೆ ಎಂದು ಅವರ ಪರ ವಕೀಲ ಕೃಷ್ಣೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ಕಾಫಿ ಡೇ ಗ್ಲೋಬಲ್‌ ಲಿಮಿಟೆಡ್‌, ವ್ಯವಸ್ಥಾಪಕ ನಿರ್ದೇಶಕ, ಜಯರಾಜ್‌ ಸಿ. ಹುಬ್ಳಿ, ಸದಾನಂದ ಪೂಜಾರಿ, ನಿತಿನ್‌ ಬಾಗ್ಮನೆ, ಕಿರೀಟಿ ಸಾವಂತ್‌, ಜಾವಿದ್‌ ಪರ್ವಿಜ್‌ ಬಂಧನಕ್ಕೆ ಆದೇಶ ನೀಡಿತ್ತು. ಎಂಟು ಮಂದಿಗೂ ಜಾಮೀನು ಸಿಕ್ಕಿದೆ.

ಕಾಫಿ ಡೇ ಗ್ಲೋಬಲ್‌ ಲಿಮಿಟೆಡ್‌ ನೀಡಿರುವ ಚೆಕ್‌ಗಳು ಅಮಾನ್ಯವಾಗಿವೆ ಎಂದು ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿಯ ಕಾಫಿ ಬೆಳೆಗಾರ ಕೆ.ನಂದೀಶ್‌ ಅವರು ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT