ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಸಿಕ ಖಿನ್ನತೆ ಶಂಕೆ: ನೇಣು ಹಾಕಿಕೊಂಡು ಆತ್ಮಹತ್ಯೆ 

Published 10 ಏಪ್ರಿಲ್ 2024, 16:28 IST
Last Updated 10 ಏಪ್ರಿಲ್ 2024, 16:28 IST
ಅಕ್ಷರ ಗಾತ್ರ

ಶೃಂಗೇರಿ: ತಾಲ್ಲೂಕಿನ ಅಡ್ಡಗದ್ದೆ ಮೂಲದ ಸುಧೀರ್ (50) ತಾವು ಕೆಲಸ ಮಾಡುತ್ತಿದ್ದ ಹಾರ್ಡ್‍ವೇರ್‌ ಅಂಗಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶೃಂಗೇರಿಯ ಮಂಜುನಾಥ ಹಾರ್ಡ್‍ವೇರ್‌ನಲ್ಲಿ 30 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಅವರು, ಮಂಗಳವಾರ ಮನೆಯಲ್ಲಿ ಯುಗಾದಿ ಹಬ್ಬ ಆಚರಿಸಿ ನಂತರ ಹೆಂಡತಿ, ಮಕ್ಕಳನ್ನು ತವರು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಬುಧವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಬಂದಿದ್ದ ಅವರು ಅಂಗಡಿಯಲ್ಲಿ ನೇಣು ಹಾಕಿಕೊಂಡ ಸ್ಥೀತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಅವರಿಗೆ ಬಿ.ಪಿ, ಶುಗರ್ ಕಾಯಿಲೆ ಇದ್ದು, ಚಿಕಿತ್ಸೆ ಪಡೆದರೂ ಗುಣಮುಖ ಆಗದ ಬಗ್ಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಅವರ ತಮ್ಮ ಶೃಂಗೇರಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT