ಚಿಕ್ಕಮಗಳೂರು: ತಾಲ್ಲೂಕಿನ ಮಲ್ಲೆದೇವರಹಳ್ಳಿ ಬಳಿ ಆಟೊ ರಿಕ್ಷಾ ಮತ್ತು ಟಾಟಾ ಏಸ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕ ಮನು (22) ಸಾವಿಗೀಡಾಗಿದ್ದಾರೆ.
ಮನು ಅವರು ಚಿಕ್ಕಮಗಳೂರು ಕೋಟೆ ಬಡಾವಣೆಯವರು.
ಚಿಕ್ಕಮಗಳೂರಿನಿಂದ ಮಾಗಡಿ ಕಡೆಗೆ ಸಾಗುತ್ತಿದ್ದ ಟಾಟಾ ಏಸ್ ವಾಹನ ಮತ್ತು ಮಾಗಡಿ ಕಡೆಯಿಂದ ಚಿಕ್ಕಮಗಳೂರಿಗೆ ಚಲಿಸುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಜಖಂ ಆಗಿವೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.