ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ: ಮರದಿಂದ ಬಿದ್ದು ವ್ಯಕ್ತಿ ಸಾವು

Published 30 ಮೇ 2024, 12:58 IST
Last Updated 30 ಮೇ 2024, 12:58 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ಮರಗಸಿ ಮಾಡುತ್ತಿದ್ದಾಗ ಮರದಿಂದ ಬಿದ್ದು ಸುನಿಲ್ (27) ಎಂಬುವರು ಮೃತಪಟ್ಟಿದ್ದಾರೆ.

ಸಕಲೇಶಪುರ ತಾಲ್ಲೂಕಿನ ಕೌಡಳ್ಳಿ ಗ್ರಾಮದವರಾದ ಸುನಿಲ್, ತಾಲ್ಲೂಕಿನ ಲೋಕವಳ್ಳಿ ಗ್ರಾಮದ ತನ್ನ ಹೆಂಡತಿಯ ಮನೆಯಲ್ಲಿ ಇದ್ದುಕೊಂಡು ಸುತ್ತಲ ಪ್ರದೇಶದಲ್ಲಿ ತೋಟದ ಕೆಲಸಕ್ಕೆ ಹೋಗುತ್ತಿದ್ದರು. ಬಿದರಹಳ್ಳಿ ಗ್ರಾಮದ ಜಯಮ್ಮ ಎಂಬುವವರ ತೋಟದಲ್ಲಿ ಮರಗಸಿ ಮಾಡುವಾಗ ಕೆಳಗೆ ಬಿದ್ದಿದ್ದು, ತಕ್ಷಣವೇ ಅವರನ್ನು ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಸುನಿಲ್‌ಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.

ವಿಮೆ ಮಾಡಿಸಲು ಒತ್ತಾಯ: 

ಮಲೆನಾಡಿನ ಕಾಫಿ ತೋಟಗಳಲ್ಲಿ ಆಕಸ್ಮಿಕ ಜೀವಹಾನಿ ಪ್ರಕರಣಗಳು ಸಂಭವಿಸುವುದರಿಂದ ಎಲ್ಲಾ ತೋಟಗಳ ಮಾಲೀಕರು ತಪ್ಪದೇ ಕಾರ್ಮಿಕರಿಗೆ ವಿಮೆ ಮಾಡಿಸಬೇಕು ಎಂದು ತಾಲ್ಲೂಕು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಬಾಳೂರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಬಿದರಹಳ್ಳಿ ಗ್ರಾಮದಲ್ಲಿ ಕಾರ್ಮಿಕರೊಬ್ಬರು ಮರಗಸಿ ಮಾಡುವಾಗ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಇದರಿಂದ ಬೆಳೆಗಾರರು ಹಾಗೂ ಕಾರ್ಮಿಕರ ಕುಟುಂಬಗಳು ನಷ್ಟಕ್ಕೊಳಗಾಗುತ್ತಿವೆ. ಕಾರ್ಮಿಕರು ತಮ್ಮ ಅಮೂಲ್ಯ ಜೀವ ಕಳೆದುಕೊಳ್ಳುತ್ತಿದ್ದಾರೆ. ತೋಟದ ಮಾಲೀಕರು ತಮ್ಮ ತೋಟಕ್ಕೆ ಕಾರ್ಮಿಕರ ವಿಮೆ ಮಾಡಿಸಿದ್ದರೆ ಇದರಿಂದ ಆಕಸ್ಮಿಕ ಸಾವು ನೋವುಗಳು ಸಂಭವಿಸಿದಾಗ ಕಾರ್ಮಿಕರ ಕುಟುಂಬಕ್ಕೆ ಆಸರೆಯಾಗುತ್ತದೆ. ಇದರಿಂದ ತೋಟದ ಮಾಲೀಕರಿಗೂ ಆರ್ಥಿಕ ಹೊರೆಯಾಗುವುದು ತಪ್ಪುತ್ತದೆ. ಈ ನಿಟ್ಟಿನಲ್ಲಿ ಬೆಳೆಗಾರರ ಸಂಘ ಸಾಕಷ್ಟು ಮಾಹಿತಿ ಹಾಗೂ ಮುನ್ನೆಚ್ಚರಿಕೆ ನೀಡುತ್ತಿದ್ದು, ಬೆಳೆಗಾರರು ತಪ್ಪದೇ ಕಾರ್ಮಿಕರಿಗೆ ವಿಮೆ ಮಾಡಿಸಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT