ಕಡೂರು(ಚಿಕ್ಕಮಗಳೂರು): ಧಾರಾಕಾರ ಮಳೆಯಿಂದ ತಾಲ್ಲೂಕಿನ ಮಚ್ಷೇರಿ ಕೋಡಿಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ಲಚ್ಚಾನಾಯ್ಕ(80) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಮಳೆ ಅಬ್ಬರಿಸಿತ್ತು. ಮಂಗಳವಾರ ಬೆಳಿಗ್ಗೆ ತೋಟಕ್ಕೆ ಹೋಗಿ ಬಂದಿದ್ದ ಲಚ್ಚಾನಾಯ್ಕ, ಮನೆಯ ಹಿಂದಿನ ಶೌಚಾಲಯದಲ್ಲಿ ಇಟ್ಟಿದ್ದ ಕೋಲು ತೆಗೆದುಕೊಳ್ಳಲು ಹೋಗಿದ್ದಾರೆ. ಇದೇ ವೇಳೆ ಕುಸಿದ ಗೋಡೆ ಅವರ ಮೇಲೆ ಬಿದ್ದಿದೆ.
ಗೋಡೆಯಡಿ ಸಿಲುಕಿದ್ದನ್ನು ಕಂಡ ಅವರ ಪತ್ನಿ ಕಾಳಿಬಾಯಿ ಕೂಗಿಕೊಂಡಿದ್ದಾರೆ. ನೆರೆಹೊರೆಯವರು ಲಚ್ಚಾನಾಯ್ಕ ಅವರನ್ನು ಹೊರ ತೆಗೆದಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.