ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಒ ಕಚೇರಿಯಲ್ಲಿ ವ್ಯವಸ್ಥಾಪಕ ಆತ್ಮಹತ್ಯೆ

Published 2 ಜನವರಿ 2024, 0:26 IST
Last Updated 2 ಜನವರಿ 2024, 0:26 IST
ಅಕ್ಷರ ಗಾತ್ರ

ಮೂಡಿಗೆರೆ (ಚಿಕ್ಕಮಗಳೂರು): ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಲಿಂಗನಾಯಕ್ (58) ಸೋಮವಾರ ಬೆಳಿಗ್ಗೆ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಡೂರು ತಾಲ್ಲೂಕಿನ ಸಖರಾಯಪಟ್ಟಣದವರಾದ ಲಿಂಗನಾಯಕ್ ಎರಡು ವರ್ಷಗಳಿಂದ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

‘ಕಚೇರಿ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಅವರು, ಸೋಮವಾರ ಬೆಳಿಗ್ಗೆ 8ರ ಸುಮಾರಿಗೆ ಮನೆಯಿಂದ ಹಾಲು ತರುವುದಾಗಿ ಹೋದವರು ಮರಳಿ ಬಂದಿರಲಿಲ್ಲ. ಅವರು ನೇರವಾಗಿ ಕಚೇರಿಗೆ ಹೋಗಿ, ಅಲ್ಲಿ ತಾವು ಕೆಲಸ ಮಾಡುತ್ತಿದ್ದ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಿಬ್ಬಂದಿ ಕಚೇರಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಡೆತ್ ನೋಟ್ ಪತ್ತೆ: ಕಚೇರಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ‘ಕೆಲಸದ ಒತ್ತಡ ಅಧಿಕವಾಗಿತ್ತು. ಇತ್ತೀಚೆಗೆ ನಡೆದ ಲೋಕಾಯುಕ್ತ ದಾಳಿಯ ಬಳಿಕ ನೌಕರ ಬಶೀರ್ ಅವರ ಕ್ಲಸ್ಟರ್ ಕೆಲಸ ಬಾಕಿ ಉಳಿದಿತ್ತು. ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಕೂಡ ಇತ್ತು. ಸಮಯಕ್ಕೆ ಸರಿಯಾಗಿ ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ರಾತ್ರಿ ನಿದ್ರೆ ಕೂಡ ಬರುತ್ತಿರಲಿಲ್ಲ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಮ್ಮ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಎರಡು ಪುಟಗಳ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಮೂಡಿಗೆರೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ್ದ ಜನರು
ಮೂಡಿಗೆರೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ್ದ ಜನರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT