ಭಾನುವಾರ, ಜೂಲೈ 12, 2020
22 °C

ಕೊಟ್ಟಿಗೆಹಾರದ ಮಂಜುನಾಥ್ ಆಚಾರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಟ್ಟಿಗೆಹಾರ: ಇಲ್ಲಿಗೆ ಸಮೀಪದ ಅಜಾದ್‍ನಗರದ ನಿವಾಸಿ, ಬಿಎಸ್‍ಎನ್‍ಎಲ್ ನಿವೃತ್ತ ನೌಕರ ಎಸ್.ಮಂಜುನಾಥ್ ಆಚಾರ್ (58) ಅವರು ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ ನಿಧನರಾದರು.

ಜಾವಳಿ, ಬಣಕಲ್ ದೂರವಾಣಿ ವಿನಿಮಯ ಕೇಂದ್ರಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ಈಚೆಗಷ್ಟೇ ಸ್ವಯಂ ನಿವೃತ್ತಿ ಪಡೆದಿದ್ದರು. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಗುರುವಾರ ಬೆಳಿಗ್ಗೆ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.