ಗುರುವಾರ , ಮೇ 26, 2022
22 °C

ಬಾಲಕಿ ಅತ್ಯಾಚಾರ ಪ್ರಕರಣ: 7 ಆರೋಪಿಗಳು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 16 ಮಂದಿ, ಕ್ರಷರ್‌ ಕೆಲಸಕ್ಕೆ ಬಾಲಕಿ ನೇಮಿಸಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ಕ್ರಷರ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಪೈಕಿ ಬಾಲಕಿಯ ಸಂಬಂಧಿ ಮಹಿಳೆ ಗೀತಾ (ಚಿಕ್ಕಮ್ಮ ಎಂದು ಹೇಳಿಕೊಂಡಿರುವ), ಸ್ಮಾಲ್‌ ಅಭಿ, ಗಿರೀಶ್‌, ವಿಕಾಸ್‌, ಮಣಿಕಂಠ, ಅಶ್ವತ್ಥ್‌ ಗೌಡ, ರಾಜೇಶ್‌ ಈ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಸಂಪತ್‌, ಅಮಿತ್‌, ಸಂತೋಷ್‌, ದೀಕ್ಷಿತ್‌, ಸಂತೋಷ್‌, ನಿರಂಜನ್‌, ನಯನ್‌ಗೌಡ, ಅಭಿಗೌಡ, ಯೋಗೀಶ್‌, ಕ್ರಷರ್‌ ಮಾಲೀಕ ಈ ಆರೋಪಿಗಳು ತಲೆಮೆರೆಸಿಕೊಂಡಿದ್ದಾರೆ. ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ನಿರಂತರವಾಗಿ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ. ಕೃತ್ಯಕ್ಕೆ ಬಾಲಕಿಯ ಸಂಬಂಧಿ ಗೀತಾ ಕುಮ್ಮಕ್ಕು ನೀಡಿರುವ ಗುಮಾನಿ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು