ಕಡೂರು: ಸಮ್ಮೇಳನಗಳು ಸಾಹಿತ್ಯ, ಸಂಸ್ಕೃತಿಗೆ ಮೀಸಲಾಗದೆ ಕ್ಷೇತ್ರದ ಅಭಿವೃದ್ಧಿಗೆ ಚಿಂತನೆ ನಡೆಸುವ ವೇದಿಕೆಯೂ ಆಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ತಾಲ್ಲೂಕಿನ ಚಿಕ್ಕನಲ್ಲೂರು ಗ್ರಾಮದ ಕಲ್ಲೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ನಾಲ್ಕನೇ ಜಾನಪದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ಕಲೆ ಮತ್ತು ಸಂಸ್ಕೃತಿ ಮುಂದಿನ ಪೀಳಿಗೆಗೆ ಆಸ್ತಿಯಾಗಿ ಉಳಿಯಬೇಕು. ಕಡೂರು ಜಾನಪದ ಕಲಾವಿದರ ತವರೂರು ಎಂಬುದು ಹೆಮ್ಮೆಯ ಸಂಗತಿ. ಜೀವನಾನುಭವವನ್ನು ನೇರವಾಗಿ ನಮಗೆ ತಿಳಿಸುವ, ಹಲವಾರು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಶಕ್ತಿ ಜಾನಪದದಲ್ಲಿದೆ. ಜಾನಪದ ಸಂಸ್ಕೃತಿಯಲ್ಲಿ ಆಧುನಿಕ ಅವಿಷ್ಕಾರಗಳಿಗೂ ಮಿಗಿಲಾದ ಸಂಗತಿಗಳು ಅಡಗಿವೆ. ಅದನ್ನು ಉಳಿಸಲು ಶ್ರಮಿಸುತ್ತಿರುವ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದರು.

ಆಧುನಿಕತೆಯ ಭರಾಟೆಯಲ್ಲಿ ಜಾನಪದ ಸಂಸ್ಕೃತಿ ದೂರವಾಗುತ್ತಿದೆ. ಗ್ರಾಮೀಣ ಭಾಗದಲ್ಲಿಯೇ ಜಾನಪದ ನೇಪಥ್ಯಕ್ಕೆ ಸರಿಯುತ್ತಿರುವುದು ಬೇಸರದ ಸಂಗತಿ ಎಂದು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಜಾನಪದ ಕಲಾವಿದ ಸಿ. ತಿಪ್ಪೇಶ್ ಹೇಳಿದರು.

ಜಾನಪದ ಉಳಿಸಲು ಜೀವನಪೂರ್ತಿ ಕ್ರಿಯಾಶೀಲನಾಗಿರುತ್ತೇನೆ. ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಗಮನ ಕೊಟ್ಟಂತೆ ಅವರಲ್ಲಿ ಜಾನಪದ ಸಂಸ್ಕೃತಿಯ ಬಗ್ಗೆಯೂ ಆಸಕ್ತಿ ಮೂಡಿಸಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಿ.ಸುರೇಶ್, ನಮ್ಮ ಮೂಲ ಸಂಸ್ಕೃತಿಯಾದ ಜಾನಪದದ ಸೊಗಡನ್ನು ಮುಂದಿನ ಪೀಳಿಗೆಗೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಷತ್ತು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿದಿನ ಜೀವನ ಆರಂಭವಾಗುವುದೇ ಜಾನಪದದಿಂದ. ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿರುವ ಜಾನಪದವನ್ನು ಉಳಿಸುವ ಕಾರ್ಯ ಆಗಬೇಕಿದೆ ಎಂದರು.

ಸಾಹಿತಿ ಚಟ್ನಳ್ಳಿ ಮಹೇಶ್ ಆಶಯ ಭಾಷಣ ಮಾತನಾಡಿ, ಜಾನಪದ ಉಳಿಯಲು ಶ್ರದ್ಧೆ ಬಹುಮುಖ್ಯ. ಇಂತಹ ಕಾರ್ಯಕ್ರಮಗಳು ಜಾನಪದದ ಬಗ್ಗೆ ಯುವಪೀಳಿಗೆಯಲ್ಲಿ ಆಸಕ್ತಿ ಮೂಡಿಸುವಲ್ಲಿ ಪೂರಕವಾಗಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಜಾನಪದ ವಸ್ತು ಪ್ರದರ್ಶನ ಉದ್ಘಾಟಿಸಿದರು. ಜಾನಪದ ಕಲಾವಿದರಾದ ಮಾಳೆನಹಳ್ಳಿ ಬಸಪ್ಪ, ಮುಗುಳಿ ಲಕ್ಷ್ಮಿದೇವಮ್ಮ, ಕಸಾಪ ಹಾಸನ ಘಟಕದ ಅಧ್ಯಕ್ಷ ಎಚ್.ಎನ್.ಮಲ್ಲೇಶಗೌಡ, ಜಿಲ್ಲಾ ಕಸಾಪ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ಕೋಶಾಧ್ಯಕ್ಷ ಪ್ರಕಾಶ್ ನಾಯ್ಕ, ತಾಲ್ಲೂಕು ಅಧ್ಯಕ್ಷ ಚಿಕ್ಕನಲ್ಲೂರು ಪರಮೇಶ್, ಜಿಲ್ಲಾ ಕೆಡಿಪಿ ಸದಸ್ಯ ಗುಮ್ಮನಹಳ್ಳಿ ಅಶೋಕ್, ಸಮ್ಮೇಳನದ ವ್ಯವಸ್ಥಾಪನ ಸಮಿತಿ ಮುಖ್ಯಸ್ಥ ಕ್ಷೇತ್ರಪಾಲ, ನಿವೃತ್ತ ಶಿಕ್ಷಕ ರಾಜಪ್ಪ, ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಗದೀಶ್ವರಾಚಾರ್, ಆಸಂದಿ ಕಲ್ಲೇಶ್, ರಾಜು,ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.