ಚಿಕ್ಕಮಗಳೂರು: ಹೆಣ್ಣು ಮಕ್ಕಳ ಸಂತತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಭ್ರೂಣ ಹತ್ಯೆ ಮತ್ತಿತರೆ ದುಷ್ಕೃತ್ಯ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಆಜಾದ್ ಪಾರ್ಕಿನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಸಂಜೀವಿನಿ ಒಕ್ಕೂಟದ ಮಹಿಳೆಯರು ಉತ್ಪಾದಿಸಿದ ವಸ್ತಗಳ ಮಾರಾಟ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು.

‘40 ವರ್ಷವಾದರೂ ಯುವಕರಿಗೆ ಮದುವೆಯಾದ ಹಲವರನ್ನು ನಾನು ನೋಡಿದ್ದೇನೆ. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರಣ. ಈ ಬೆಳೆವಣಿಗೆ ಆತಂಕಕಾರಿಯಾಗಿದೆ ಎಂದರು.

ಮಹಿಳೆಯರ ಹಕ್ಕುಗಳು, ಸಾಧನೆ, ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಮುಖ ವೇದಿಕೆಯಾಗಿದೆ ಎಂದು ಹೇಳಿದರು.

ಯಾವುದೇ ಒಂದು ಸಮುದಾಯದ ಅಭಿವೃದ್ಧಿ ಅಳೆಯಬೇಕೆಂದರೆ ಸಮುದಾಯದ ಮಹಿಳೆಯರ ಸಾಧನೆಯನ್ನು ಮಾನದಂಡವಾಗಿ ಇಟ್ಟುಕೊಳ್ಳಬೇಕು. ಇದನ್ನು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹೇಳಿದ್ದರು. ವಿಶ್ವಸಂಸ್ಥೆ 1975ರಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಣೆ ಮಾಡಿದೆ. ಭಾರತದಲ್ಲಿ 2001ರಲ್ಲಿ ಮಹಿಳಾ ಸಬಲೀಕರಣ ವರ್ಷ ಎಂದು ಘೋಷಣೆ ಮಾಡಿದೆ ಎಂದು ವಿವರಿಸಿದರು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿ ಪ್ರಮುಖ ಪಾತ್ರ ವಹಿಸುತ್ತಾಳೆ. ಕೃಷಿ, ಪಶುಸಂಗೋಪನೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಇತ್ತೀಚೆಗೆ ಕೈಗಾರಿಕೆಯಲ್ಲೂ ಮಹಿಳೆಯರು ಮುಂದೆ ಬಂದಿದ್ದಾರೆ. ರಾಜ್ಯದಲ್ಲಿ 405 ಮಂದಿ ಮಹಿಳಾ ಎಲೆಕ್ಟ್ರಿಕಲ್ ಗುತ್ತಿಗೆದಾರರಿದ್ದಾರೆ ಎಂಬುದೇ ಅಚ್ಚರಿಯ ಸಂಗತಿ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ‘ಮಹಿಳೆಯರ ಪಾತ್ರ ಸಮಾಜದಲ್ಲಿ ಬಹಳ ಹಿರಿದಾಗಿದೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸರಿಯಾದ ಸ್ಥಾಮಮಾನ ನೀಡಿಲ್ಲ ಎಂಬ ಕೊರಗಿದೆ. ಆದರೆ, ಮಹಿಳೆಯರಿಗೆ ಎಲ್ಲ ರೀತಿಯ ಸ್ಥಾನಮಾನ ಕೊಟ್ಟಿದ್ದೇವೆ. ಅದನ್ನು ನಿರ್ವಹಿಸುವ ಶಕ್ತಿ ಇರುವುದಕ್ಕೆ ಅವರಿಗೆ ಸ್ಥಾನ ಮಾನ ದೊರೆತಿದೆ’ ಎಂದರು.

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.