ಶುಕ್ರವಾರ, ಆಗಸ್ಟ್ 19, 2022
22 °C

ಶಾಸಕ ಕುಮಾರಸ್ವಾಮಿಗೆ ಜ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಜ್ವರ, ಶೀತದಿಂದ ಬಳಲುತ್ತಿದ್ದಾರೆ. ಆದರೆ, ಕೋವಿಡ್‌ ದೃಢವಾದ ಬಗ್ಗೆ ಸ್ಪಷ್ಟವಾಗಿ ಅವರು ತಿಳಿಸಿಲ್ಲ.

ಸೋಮವಾರ ತಮ್ಮ ಫೇಸ್‌ಬುಕ್‌ನಲ್ಲಿ ‘ಕಳೆದೆರಡು ದಿನಗಳಿಂದ ಶೀತ ಹಾಗೂ ಜ್ವರ ಹೆಚ್ಚಾಗಿದೆ. ಈ ವಾರ ಸಂಪೂರ್ಣವಾಗಿ ಯಾವುದೇ ಸಭೆ, ಸಮಾರಂಭ ಹಾಗೂ ಮನೆ, ಕಚೇರಿಯಲ್ಲಿ ಸಂದರ್ಶನ ಮಾಡುವುದಿಲ್ಲ. ವೈದ್ಯರ ನಿರ್ದೇಶನದಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಜ್ವರ ತೀವ್ರಗೊಂಡರೆ ಮುಂದೆ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುತ್ತೇನೆ. ಹಾಗಾಗಿ, ಕ್ಷೇತ್ರದ ಜನತೆ ಅನ್ಯತಾ ಭಾವಿಸದೆ ಮುಂದಿನ ಒಂದು ವಾರ ಮಟ್ಟಿಗೆ ಯಾರು ಸಹ ಯಾವುದೇ ಕೆಲಸಗಳಿಗೆ ನೇರವಾಗಿ ಕಾಣಲು ಬರಬಾರದು ಎಂದು ಈ ಮೂಲಕ ವಿನಂತಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಕೋರಿದ್ದಾರೆ.

ಕುಮಾರಸ್ವಾಮಿ ಅವರಿಗೆ ಈವರೆಗೆ ಕೋವಿಡ್‌ ಪರೀಕ್ಷೆ ಮಾಡಿಲ್ಲ ಎಂದು ಮೂಡಿಗೆರೆ ತಾಲ್ಲೂಕು ಆಸ್ಪತ್ರೆ ಮೂಲಗಳು ತಿಳಿಸಿವೆ. ಕುಮಾರಸ್ವಾಮಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು