ಮೂಡಿಗೆರೆ: ‘ಇಲ್ಲಿನ ಹಿಂದೂ ಮಹಾಗಣಪತಿ ಸಮಿತಿಯಿಂದ ಮಂಗಳವಾರ ನಡೆದ ಹಿಂದೂ ಸಂಗಮ ಮಹಾರ್ಯಾಲಿಯಲ್ಲಿ ಶಾಸಕಿ ನಯನಾ ಮೋಟಮ್ಮ ಅವರು ಪಾಲ್ಗೊಂಡಿರುವುದು ಅವರ ವೈಯಕ್ತಿಕ ವಿಚಾರವಾಗಿದೆ’ ಎಂದು ಕಾಂಗ್ರೆಸ್ ಬ್ಲಾಕ್ ವಕ್ತಾರ ಮರಗುಂದ ಪ್ರಸನ್ನ ಹೇಳಿದರು.

ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಶಾಸಕಿ ನಯನಾ ಮೋಟಮ್ಮ, ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರೊಂದಿಗೆ ಕೇಸರಿ ಶಾಲು ಧರಿಸಿ ವೇದಿಕೆ ಹಂಚಿಕೊಂಡಿರುವುದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ವೈಯಕ್ತಿಕವಾಗಿ ಹಿಂದೂ ಮಹಾ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ಪ್ರಮೋದ್ ಮುತಾಲಿಕ್ ಅವರ ಯಾವುದೇ ವಿಚಾರವನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಪ್ರಮೋದ್ ಮುತಾಲಿಕ್ ಅವರು 45ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿದ್ದಾರೆ. ಅವರು ಮಹಿಳೆಯರ ಮೇಲೆ ಹಲವು ಬಾರಿ ಹಲ್ಲೆ ಹಾಗೂ ದೌರ್ಜನ್ಯ ನಡೆಸಿದ್ದಾರೆ. ಅಂತಹ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯೊಂದಿಗೆ ಶಾಸಕಿ ನಯನಾ ಮೋಟಮ್ಮ ಅವರು ವೇದಿಕೆ ಹಂಚಿಕೊಂಡಿದ್ದು, ದುರದೃಷ್ಟಕರವೆಂದು ಪಕ್ಷ ಭಾವಿಸುತ್ತದೆ' ಎಂದರು.

'ಶಾಸಕಿ ನಯನಾ ಮೋಟಮ್ಮ ಅವರು ಸಾರ್ವಜನಿಕ ಹಿಂದೂ ಮಹಾಗಣಪತಿ ಉತ್ಸವ ಸಮಿತಿಯ ಕಾರ್ಯಧ್ಯಕ್ಷರಾಗಿರುವುದಕ್ಕೆ ಆಕ್ಷೇಪವಿಲ್ಲ. ಆದರೆ ಗೋಹತ್ಯೆಗೆ ಪ್ರತಿಯಾಗಿ ಮಾನವ ಹತ್ಯೆ ಪ್ರಚೋದಿಸುವ ಪ್ರಮೋದ್ ಮುತಾಲಿಕ್ ಅವರನ್ನು ಹಿಂದೂ ಮಹಾ ರ್ಯಾಲಿಗೆ ಕರೆ ತಂದಿದ್ದು ಶಾಸಕರ ವೈಯಕ್ತಿಕ ನಿರ್ಧಾರವಾಗಿದೆ. ಹಿಂದೆ ಮೋಟಮ್ಮ ಅವರು ಸಚಿವರಾಗಿದ್ದಾಗ ಪ್ರಮೋದ್ ಮುತಾಲಿಕ್ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ಕಾಲಿಡಲು ಬಿಟ್ಟಿರಲಿಲ್ಲ. ಸಂವಿಧಾನಕ್ಕೆ ವಿರುದ್ಧವಾದ ಕೃತ್ಯಗಳಲ್ಲಿ ತೊಡಗಿರುವ, ಜಾತ್ಯತೀತ ಪರಿಕಲ್ಪನೆಯನ್ನು ತಿರಸ್ಕರಿಸಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಕರೆ ಕೊಡುತ್ತಿರುವ ಪ್ರಮೋದ್ ಮತಾಲಿಕ್ ಅವರ ವಿಚಾರವನ್ನು ಕಾಂಗ್ರೆಸ್ ಪಕ್ಷ ತಿರಸ್ಕರಿಸುತ್ತದೆ ಎಂದು ಹೇಳಿದರು.

‘ಶಾಸಕಿಯ ಸೈದ್ಧಾಂತಿಕ ದಿವಾಳಿತನ’

ಶಾಸಕಿ ನಯನಾ ಮೋಟಮ್ಮ ಅವರು ಹಿಂದೂ ಮಹಾ ರ್ಯಾಲಿಯಲ್ಲಿ ತಾವು ಕಾಂಗ್ರೆಸ್ ನಲ್ಲಿ ಇರುತ್ತೇನಾ ಅಥವಾ ಬಿಜೆಪಿ ಎಸ್ಡಿಪಿಐ ಬಿಎಸ್ಪಿ ಪಕ್ಷಕ್ಕೆ ಹೋಗುತ್ತೇನಾ ಎಂದು 3 ವರ್ಷದ ನಂತರ ನಿರ್ಧರಿಸುವುದಾಗಿ ಹೇಳಿರುವುದು ಅವರ ಸೈದ್ಧಾಂತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಮರಗುಂದ ಪ್ರಸನ್ನ ಟೀಕಿಸಿದರು. ಮೂರು ವರ್ಷದ ನಂತರ ಬದಲು ಈಗಲೇ ನಿರ್ಧರಿಸಿದರೆ ಸೂಕ್ತವಾಗುತ್ತದೆ. ಶಾಸಕರ ನಡೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.