ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರೀಕೆರೆ: ಗುರುಭವನ ನಿರ್ಮಿಸಲು ಬದ್ಧ: ಸುರೇಶ್

Last Updated 6 ಸೆಪ್ಟೆಂಬರ್ 2022, 5:45 IST
ಅಕ್ಷರ ಗಾತ್ರ

ತರೀಕೆರೆ: ತಾಲ್ಲೂಕಿನ ಸಮಗ್ರ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪಟ್ಟಣದಲ್ಲಿ ಗುರುಭವನ ನಿರ್ಮಿಸಲು ಬದ್ಧ ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಇಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ 61ನೇ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರುವಲ್ಲಿ ಶಿಕ್ಷಕರೇ ಮೂಲ ಕಾರಣ ಎಂದರು.

ವಾಗ್ಮಿ ಸುಧಾ ಬರಗೂರು ಮಾತನಾಡಿ, ಭವ್ಯ ಭಾರತದಲ್ಲಿ ಆರೋಗ್ಯವಂತ ಸಮಾಜ ಕಟ್ಟುವ ಕನಸನ್ನು ಶಿಕ್ಷಕರು ಕಾಣಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಹೊನ್ನೇಶ್‍ಕುಮಾರ್ ಮಾತನಾಡಿ, ಶಿಕ್ಷಣ ಇಲಾಖೆಗೆ ದೊಡ್ಡ ಮೊತ್ತದ ಅನುದಾನ ಕೊಡಿಸುವ ವಿಚಾರದಲ್ಲಿ ಶಾಸಕರ ಕಾಳಜಿ ಮತ್ತು ಶ್ರಮವಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ವಿ.ರವಿ ಮಾತನಾಡಿ, ಗುರುಭವನ ನಿರ್ಮಿಸಲು ಜಾಗ ಗುರುತಿಸಿರುವುದು ಶ್ಲಾಘನೀಯ ಎಂದರು.

ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ತಹಶೀಲ್ದಾರ್ ಪೂರ್ಣಿಮಾ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಕಮಲಾ ರಾಜೇಂದ್ರ, ತಾಲ್ಲೂಕು ಪಂಚಾಯಿತಿ ಇಒ ಗೀತಾ ಶಂಕರ್, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಬಿ.ಆನಂದಪ್ಪ, ಪದ್ಮಾವತಿ ಸಂಜೀವ್‍ಕುಮಾರ್, ಪುರಸಭೆ ಉಪಾಧ್ಯಕ್ಷೆ ಯಶೋದಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಸದಸ್ಯರಾದ ಆಶಾ, ಪವಿತ್ರಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೀಶ್, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ನಾಗರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಣೇಶ್, ಮುಖ್ಯಾಧಿಕಾರಿ ಎಚ್.ಮಹಂತೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT