ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು

ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ
Published 9 ಮಾರ್ಚ್ 2024, 14:38 IST
Last Updated 9 ಮಾರ್ಚ್ 2024, 14:38 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ದೇಶದ ಸರ್ವಾಂಗೀಣ ಪ್ರಗತಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಹೇಳಿದರು.

ತಾಲ್ಲೂಕಿನ ಮುಗಳವಳ್ಳಿಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಿದ್ದ ಗ್ರಾಮ ಪರಿಕ್ರಮ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಬಡವರು, ರೈತರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದವರಿಗೂ ಯೋಜನೆಗಳನ್ನು ರೂಪಿಸಿದ್ದಾರೆ. ಕಾಂಗ್ರೆಸ್ ಸುಳ್ಳು, ಅಪಪ್ರಚಾರದ ಮೂಲಕ ಜನರಿಗೆ ತಪ್ಪು ಸಂದೇಶ ನೀಡಲು ಮುಂದಾಗಿದೆ. ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಕೇಂದ್ರ ಸರ್ಕಾರ ನೀಡುತ್ತಿರುವ ಅಕ್ಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರ ನೀಡುತ್ತಿದೆ ಎಂದು ಬಿಂಬಿಸುತ್ತಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ತಂದ ಯೋಜನೆಗಳನ್ನು ಕಡಿತಗೊಳಿಸಿದೆ ಎಂದು ಆಪಾದಿಸಿದರು.

ರೈತ ಮೊರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶಂಭೈನೂರು ಆನಂದಪ್ಪ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿ ಲಂಚಮುಕ್ತ, ಕಪ್ಪುಚುಕ್ಕೆ ರಹಿತ ಆಡಳಿತ ನಡೆಸುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶ ದೊಡ್ಡದು ಎಂಬ ಭಾವನೆಯೊಂದಿಗೆ ಕಾರ್ಯಕರ್ತರೆಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಉಪಾಧ್ಯಕ್ಷ ನಿರಂಜನ್, ಮುಖಂಡರಾದ ದೀಪಕ್ ದೊಡ್ಡಯ್ಯ, ಪುಣ್ಯಪಾಲ್, ಕೆ.ಪಿ.ವೆಂಕಟೇಶ್, ನಾಗರಾಜ್, ದಿನೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT