ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಬೂರು: ಮತ್ತಿಬ್ಬರಲ್ಲಿ ಮಂಗನ ಕಾಯಿಲೆ ಪತ್ತೆ

Last Updated 13 ಫೆಬ್ರುವರಿ 2020, 18:32 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕಿನ ಮಡಬೂರು ಗ್ರಾಮದ ವ್ಯಾಪ್ತಿಯಲ್ಲಿ ಮತ್ತಿಬ್ಬರಲ್ಲಿ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ.

ಮಡಬೂರು ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುವ ಇಬ್ಬರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಜ್ವರ ಬಂದ ಪರಿಣಾಮ ಇಬ್ಬರ ರಕ್ತದ ಮಾದರಿಯನ್ನು ಶಿವಮೊಗ್ಗದ ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯಕ್ಕೆ (ವಿಡಿಎಲ್) ಕಳುಹಿಸಲಾಗಿತ್ತು.

ಈ ಬಗ್ಗೆ ‘ಪ್ರಜಾವಾಣಿ’ ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಪ್ರಸಾದ್ ಅವರನ್ನು ಸಂಪರ್ಕಿಸಿದಾಗ, ‘ಇದುವರೆಗೆ ಒಟ್ಟು 5 ಮಂದಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಈ ಪೈಕಿ ಹೊರ ರಾಜ್ಯದಿಂದ ಬಂದಿದ್ದ ಇಬ್ಬರು ಕಾರ್ಮಿಕರು ಅವರ ಊರಿಗೆ ತೆರಳಿದ್ದಾರೆ. ಉಳಿದ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಟೇಟ್‌ನ ಎಲ್ಲಾ ಕಾರ್ಮಿಕರು ಕೆಎಫ್‌‌ಡಿ ನಿರೋಧಕ ಲಸಿಕೆ ನೀಡಲಾಗಿದೆ. ಗುರುವಾರ ಮಡಬೂರು ಗ್ರಾಮದ 5 ಕಿ.ಮೀ ವ್ಯಾಪ್ತಿಯಲ್ಲಿನ ಗ್ರಾಮಸ್ಥರಿಗೆ ಕೆಎಫ್‌ಡಿ ನಿರೋಧಕ ಲಸಿಕೆ ನೀಡುವ ಬಗ್ಗೆ ವ್ಯಾಪಕ ಪ್ರಚಾರ ಮಾಡಲಾಗಿದೆ. ಇದೇ 14ರಂದು ಗ್ರಾಮಸ್ಥರಿಗೆ ಲಸಿಕೆ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT