ಮೂಡಿಗೆರೆ: ಶಿಕ್ಷಣದಲ್ಲಿ ಶಿಕ್ಷೆಗಿಂತಲೂ ಪ್ರೀತಿಗೆ ಪ್ರಾಮುಖ್ಯತೆಯಿದ್ದು ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಪ್ರೀತಿಯಿಂದಲೇ ಕಲಿಸಬೇಕು ಎಂದು ತಹಶೀಲ್ದಾರ್ ರಾಜಶೇಖರ್ ಮೂರ್ತಿ ಹೇಳಿದರು.

ತಾಲ್ಲೂಕಿನ ಹೆಸ್ಗಲ್ ಗ್ರಾಮ ಪಂಚಾಯಿತಿಯ ಬಿಳಗುಳ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ನಡೆದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಶಿಕ್ಷೆ ನೀಡಿ ಶಿಕ್ಷಣ ನೀಡುವ ಕಾಲ ಕಳೆದು ಹೋಗಿದೆ. ಈಗ ಮಕ್ಕಳಿಗೆ ಪ್ರೀತಿಯಿಂದ ಶಿಕ್ಷಣ ಹಾಗೂ ಸಂಸ್ಕಾರ ನೀಡುವ ಜವಾಬ್ದಾರಿ ಎಲ್ಲಾ ಶಿಕ್ಷಕರು ಹಾಗೂ ಪೋಷಕರ ಮೇಲಿದೆ. ಸರ್ಕಾರದಿಂದ ಸರ್ಕಾರಿ ಶಾಲೆಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯ ಸಿಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಬಳಸಿಕೊಳ್ಳಬೇಕು. ಸರ್ಕಾರಿ ಶಾಲೆ ಎಂಬ ತಾತ್ಸಾರವನ್ನು ಪೋಷಕರು ಬಿಡಬೇಕು. ಸರ್ಕಾರಿ ಶಾಲೆಗಳು ಶಾಸಗಿ ಶಾಲೆಗಳಿಗೆ ಮೀರಿಸುವಂತೆ ಫಲಿತಾಂಶ ನೀಡುತ್ತಿವೆ. ಇದನ್ನು ಮನಗಂಡು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎ. ಮೀನಾಕ್ಷಿ ಮಾತನಾಡಿ, ಮಕ್ಕಳನ್ನು ಶಾಲೆಗಳಿಗೆ ಪ್ರೀತಿ ಪೂರ್ವಕವಾಗಿ ಬರಮಾಡಿಕೊಂಡು ಶಿಕ್ಷಣದ ಬಗ್ಗೆ ಪ್ರೀತಿ ಬೆಳೆಸುವ ಉದ್ದೇಶದಿಂದ ಸರ್ಕಾರ ಪ್ರತಿವರ್ಷ ಈ ಕಾರ್ಯಕ್ರಮ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡು ಶಾಲೆ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ತಾಲ್ಲೂಕಿನಲ್ಲಿ ಶಾಲೆಗಳ ಕಟ್ಟಡ ಸುವ್ಯವಸ್ಥೆಯಲ್ಲಿವೆ. ಆದರೂ ಮಳೆಯಿಂದ ತೊಂದರೆ ಎದುರಾದರೆ ಕೂಡಲೇ ಗಮನಕ್ಕೆ ತರಲು ಎಲ್ಲಾ ಶಿಕ್ಷಕರಿಗೆ ಸೂಚಿಸಲಾಗಿದೆ. ಮಳೆಯಿಂದ ಶಾಲೆಗಳಿಗೆ ರಜೆ ನೀಡಿದರೆ ಅದನ್ನು ಸರಿದೂಗಿಸಲು ವೇಳಾಪಟ್ಟಿ ಸಿದ್ಧಪಡಿಸಿಕೊಂಡು, ಶೈಕ್ಷಣಿಕ ವರ್ಷದ ಅವಧಿ ಕಡಿಮೆಯಾದಂತೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಎಸ್ಡಿಎಂಸಿ ಅಧ್ಯಕ್ಷ ಚಂದ್ರು ಒಡೆಯರ್ ಅಧ್ಯಕ್ಷತೆ ವಹಿಸಿದ್ದರು. ಹೆಸಗಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಸಿ. ಶ್ರೀನಿವಾಸ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೇಮಂತಚಂದ್ರ, ಶಾಲಾ ಮುಖ್ಯ ಶಿಕ್ಷಕಿ ಚೂಡಾಮಣಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಗೌರವಾಧ್ಯಕ್ಷ ಅಮರ್ನಾಥ್, ಎಸ್ಡಿಎಂಸಿ ಸದಸ್ಯರಾದ ರಾಜೇಶ, ರಮ್ಯಾ, ಸೌಮ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.