ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳೆ ಶವ ಪತ್ತೆ: ಕೊಲೆ ಶಂಕೆ

Published 29 ಜೂನ್ 2024, 16:16 IST
Last Updated 29 ಜೂನ್ 2024, 16:16 IST
ಅಕ್ಷರ ಗಾತ್ರ

ಮೂಡಿಗೆರೆ: ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಬೆಳಿಗ್ಗೆ ಮಹಿಳೆಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟ ಮಹಿಳೆಯನ್ನು ಹೆಸ್ಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಗುಳ ಗ್ರಾಮದ ಕಲ್ಯಾಣಿ (55) ಎಂದು ಗುರುತಿಸಲಾಗಿದೆ.

ಕಾಲೇಜು ಆವರಣದ ವಾಹನ ನಿಲುಗಡೆ ಶೆಡ್ ಪಕ್ಕದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮೈಮೇಲೆ ಗಾಯಗಳ ಗುರುತುಗಳಿದ್ದವು. ಮೃತದೇಹದ ಪಕ್ಕದಲ್ಲಿಯೇ ರಕ್ತ ಕಂಡು ಬಂದಿದೆ.

ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಭೇಟಿ ನೀಡಿದರು. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT