ಮೂಡಿಗೆರೆ: ಭೀಮಾ ಕೋರೆಗಾಂವ್ ಆಚರಣೆ ಸಂಘದ ವತಿಯಿಂದ ಏ. 24ರಂದು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಸುಂದ್ರೇಶ್ ಕನ್ನಾಪುರ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಜಯಂತಿ ಒಂದು ಸ್ಮರಣೆಯ ದಿನವಲ್ಲ. ಬದಲಾಗಿ ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಪಸರಿಸುವ ಮಹತ್ವದ ದಿನವಾಗಿದೆ. ಹಾಗಾಗಿ ನಮ್ಮ ಸಂಘದಿಂದ ಅದ್ದೂರಿಯಾಗಿ ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಏ. 17ರಂದು ಬೆಳಿಗ್ಗೆ 11ಕ್ಕೆ ಕೊಲ್ಲಿಬೈಲ್ನಿಂದ ಹ್ಯಾಂಡ್ಪೋಸ್ಟ್ ಸರ್ಕಲ್ವರೆಗೆ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು, ಖಜಾಂಚಿ ಭಾನುಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-126-1907239444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.