ಮೂಡಿಗೆರೆ: ತಾಲ್ಲೂಕಿನ ಎಲ್ಲಾ ಮಸೀದಿ, ದೇವಾಲಯ, ಚರ್ಚ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸುವ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಅತ್ಯಂತ ಅಗತ್ಯವಿದೆ ಎಂದು ಪೀಸ್ ಹಾಗೂ ಅವೆರ್ನೆಸ್ ಟ್ರಸ್ಟಿನ ಸಂಸ್ಥಾಪಕ ಅಲ್ತಾಫ್ ಬಿಳಗುಳ ಒತ್ತಾಯಿಸಿದರು.

ಪಟ್ಟಣದಲ್ಲಿ ಪೀಸ್ ಹಾಗೂ ಅವೆರ್ನೆಸ್ ಟ್ರಸ್ಟ್ ವತಿಯಿಂದ ಪೊಲೀಸ್ ಠಾಣಾಧಿಕಾರಿಗೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

'ಇತ್ತೀಚಿನ ದಿನಗಳಲ್ಲಿ ಅಹಿತಕರ ಘಟನೆಗಳು, ಕಳ್ಳತನ, ಕಲಹ ಹಾಗೂ ಶಾಂತಿ ಭಂಗವಾಗುವಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿರುವುದರಿಂದ ಹಾಗೂ ಮುಂದೆ ಸಂಭವಿಸುವ ಸಾಧ್ಯತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳ, ಧಾರ್ಮಿಕ ಕೇಂದ್ರಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಇದರಿಂದ ಅಪರಾಧ ಪ್ರಕರಣ ತಡೆಯಲು ಹಾಗೂ ನೈಜ ಅಪರಾಧಿಗಳನ್ನು ಪತ್ತೆ ಹಚ್ಚಲು ಸಹಕಾರಿ ಆಗುತ್ತದೆ. ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಹೆಚ್ಚುತ್ತದೆ. ಧಾರ್ಮಿಕ ಸೌಹಾರ್ದ ಕಾಪಾಡಲು ನೆರವಾಗುತ್ತದೆ. ಹಾಗಾಗಿ ತಾಲ್ಲೂಕಿನ ವ್ಯಾಪ್ತಿಯ ಎಲ್ಲಾ ಪ್ರಮುಖ ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದರು.

ಈ ವೇಳೆ ಟ್ರಸ್ಟಿನ ಕಾರ್ಯದರ್ಶಿ ಫೈರೋಝ್ ಆಲ್ದೂರು, ಪ್ರವೀಣ್ ಕೃಷ್ಣಾಪುರ, ಸಾಜೀದ್ ಬಣಕಲ್, ಬದ್ರುದ್ದೀನ್ ಬಿಳಗುಳ, ಸಫ್ವಾನ್ ಬಿಳಗುಳ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-126-1282623010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.