ಮೂಡಿಗೆರೆ: ಕಾಫಿ ಬೆಳೆಗಾರರ 10 ಎಚ್ಪಿವರೆಗಿನ ನೀರಾವರಿ ಪಂಪ್ಸೆಟ್ಗಳ ವಿದ್ಯುತ್ ಬಾಕಿಯ ಬಡ್ಡಿ ಮನ್ನಾ ಮಾಡಿರುವ ಸರ್ಕಾರದ ಕ್ರಮವನ್ನು ಬೆಳೆಗಾರರ ಸಂಘಟನೆಗಳು ಸ್ವಾಗತಿಸಿವೆ ಎಂದು ಬೆಳೆಗಾರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಬಾಳೂರು ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಫಿ ಬೆಳೆಗಾರರ ನೀರಾವರಿ ಪಂಪ್ಸೆಟ್ಗಳ ವಿದ್ಯುತ್ ಬಾಕಿಯ ಬಡ್ಡಿ ಮನ್ನಾ ಮಾಡಬೇಕೆಂದು 10 ವರ್ಷಗಳಿಂದ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದೇವು. ಇತ್ತೀಚೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಮೂಡಿಗೆರೆಗೆ ಬಂದಾಗ, ಜಿಲ್ಲೆಯ ಎಲ್ಲಾ ಬೆಳಗಾರರು ಹಾಗೂ ರೈತ ಸಂಘಟನೆಯ ಮುಖಂಡರು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದೆವು. ಬೆಳೆಗಾರರ ಮನವಿಗೆ ಸ್ಪಂದಿಸಿದ ಸಚಿವರು 10 ಎಚ್ಪಿವರೆಗಿನ ಪಂಪ್ಸೆಟ್ಗಳಿಗೆ ಅನ್ವಯವಾಗುವಂತೆ ಬಡ್ಡಿ ಮನ್ನಾ ಮಾಡಿದ್ದಾರೆ ಎಂದರು.

‘ಬಡ್ಡಿ ಮನ್ನಾ ಯೋಜನೆಯಲ್ಲಿ 3 ತಿಂಗಳ ಅವಧಿ ನೀಡಲಾಗಿದ್ದು, ಬೆಳೆಗಾ ರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಕಾಲದಲ್ಲಿ ಅಸಲು ಕಟ್ಟಿ ಬಡ್ಡಿ ಮನ್ನಾ ಸೌಲಭ್ಯ ಪಡೆಯಬೇಕು’ ಎಂದು ಮನವಿ ಮಾಡಿದರು.

ಈ ಬೆಳವಣಿಗೆಗೆ ಕೆಜಿಎಫ್ ಅಧ್ಯಕ್ಷ ಹಳಸೆ ಶಿವಣ್ಣ, ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ, ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ರತೀಶ್ ಕುಮಾರ್ ಸೇರಿದಂತೆ ವಿವಿಧ ಬೆಳೆಗಾರರ ಮತ್ತು ರೈತ ಸಂಘಟನೆಯ ಮುಖಂಡರು ಪ್ರಮುಖ ಪಾತ್ರ ವಹಿಸಿದ್ದಾರೆ. ಈಗಾಗಲೇ ಅಸಲಿನ ಜತೆ ಬಡ್ಡಿ ಕೂಡ ಪಾವತಿಸಿರುವ ಬೆಳೆಗಾರರಿಗೆ ಮುಂದಿನ ದಿನದಲ್ಲಿ ಅವರ ವಿದ್ಯುತ್ ಬಿಲ್ಗಳ ಮೊತ್ತದಲ್ಲಿ ಬಡ್ಡಿಯ ಮೊತ್ತವನ್ನು ಕಡಿತಗೊಳಿಸಲು ಮೆಸ್ಕಾಂ ಕ್ರಮ ವಹಿಸಿದೆ’ ಎಂದು ಅವರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-126-1853508488

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.