ಮೂಡಿಗೆರೆ: ‘ಜಲಜೀವನ್ ಮಿಷನ್ ಮಹತ್ವಾಕಾಂಕ್ಷಿ ಯೋಜನೆ ಯಾಗಿದ್ದು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು’ ಎಂದು ಕುಂದೂರು ಗ್ರಾಮ ಪಂಚಾಯಿತಿ ಸದಸ್ಯ ಡಿ.ಬಿ. ವಿಜೇಂದ್ರ ಹೇಳಿದರು.

ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ₹1.4 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಜೆಜೆಎಂ ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ. ಕುಂದೂರು ಗ್ರಾಮದ ಕಾಮಗಾರಿಯು ಪ್ರಥಮ ಹಂತದ ಕಾಮಗಾರಿಯಾಗಿದ್ದರೂ, ಮೂರು ಬಾರಿ ಪುನರ್ ಟೆಂಡರ್ ಆಗಿದ್ದರಿಂದ ಇದುವರೆಗೂ ಆರಂಭವಾಗಿರಲಿಲ್ಲ. ನಿರಂತರ ಒತ್ತಾಯದಿಂದ ಆರು ವರ್ಷಗಳ ನಂತರ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಟ್ಯಾಂಕ್ ನಿರ್ಮಾಣಕ್ಕೆ ಇದ್ದ ಜಾಗದ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು ಎಂದರು.

ಉಪಾಧ್ಯಕ್ಷೆ ಸುನೀತಾ ಮಾತನಾಡಿದರು. ಗ್ರಾಮಸ್ಥರಾದ ಕೆ.ಜೆ. ಪ್ರಸನ್ನ, ನವೀನ್, ಪ್ರಕಾಶ್, ಪುಟ್ಟಸ್ವಾಮಿ, ಕೆ.ಆರ್. ಹರೀಶ್, ಸತೀಶ್, ಮಂಜುನಾಥ್, ಶ್ರೀಪತಿಭಟ್, ದೇವರಾಜ್ ಮತ್ತಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-126-1291033338

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.