ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗೂಲ್ ಬಳಿ ಹೆದ್ದಾರಿ ಪಕ್ಕದಲ್ಲಿದ್ದ ಮರ ಏಕಾಏಕಿ ಮುರಿದು, ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ಮೂರು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದ ಘಟನೆ ಸೋಮವಾರ ನಡೆದಿದೆ.

ಘಟನೆ ಸಂಭವಿಸುವ ವೇಳೆ ಪ್ರಯಾಣಿಕರಿಂದ ತುಂಬಿದ್ದ ಸರ್ಕಾರಿ ಬಸ್ ಸಂಚರಿಸುತ್ತಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದೆ.

ಉರುಳಿ ಬಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿತ್ತು. ತಕ್ಷಣ ಎಚ್ಚೆತ್ತ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತ ಗೊಳಿಸಿ ಸಂಭವಿಸಬಹುದಾದ ಅನಾಹುತ ತಪ್ಪಿಸಿದ್ದಾರೆ.ಘಟನೆಯಿಂದ ಹೊರನಾಡು, ಬಾಳೆಹೊನ್ನೂರು ಕೊಟ್ಟಿಗೆ ಹಾರ ನಡುವೆ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಕಂಬಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-126-1001444653

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.