ಮೂಡಿಗೆರೆ: ಸಾರ್ವಜನಿಕ ಸ್ವಚ್ಛತೆ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಉದ್ಯಮಿ ದಿನೇಶ್ ಹೇಳಿದರು.

ಪಟ್ಟಣದ ಜೆಸಿಐ ಭವನದಲ್ಲಿ ಮಂಗಳವಾರ ಜೆಸಿಐ ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಅಂಗವಾಗಿ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಸ್ಟೀಲ್ ವಾಟರ್ ಬಾಟಲ್ಗಳನ್ನು ವಿತರಿಸಿ ಅವರು ಮಾತನಾಡಿದರು.

ಸ್ವಚ್ಛತೆಗಾಗಿ ನಿರಂತರ ಶ್ರಮಿಸುವ ಪೌರಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜೆಸಿಐ ಸಂಸ್ಥೆಯು ಪೌರ ಕಾರ್ಮಿಕರಿಗೆ ಸ್ಟೀಲ್ ವಾಟರ್ ಬಾಟಲ್ ವಿತರಿಸಲು ಚಿಂತಿಸಿರುವುದು ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಜೆಸಿಐ ಮೂಡಿಗೆರೆ ಘಟಕದ ಅಧ್ಯಕ್ಷ ಎಂ.ವಿ. ಸುನಿಲ್, ‘ಪೌರಕಾರ್ಮಿಕರು ಪ್ರತಿದಿನ ಶುಚಿತ್ವದ ಕಾರ್ಯದಲ್ಲಿ ಪಾಲ್ಗೊಳ್ಳದಿದ್ದರೆ ಪಟ್ಟಣದ ಸ್ಥಿತಿಯನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಪೌರಕಾರ್ಮಿಕರು ಆರೋಗ್ಯವಂತ ಬದುಕು ನಡೆಸಬೇಕು ಎಂಬ ನಿಟ್ಟಿನಲ್ಲಿ ಜೆಸಿಐ ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಅಂಗವಾಗಿ ಕುಡಿಯುವ ನೀರಿನ ಬಾಟಲಿಗಳನ್ನು ನೀಡಿದ್ದು, ಶುದ್ಧ ನೀರನ್ನು ಕುಡಿಯುವಂತಾಗಬೇಕು. ಸರ್ಕಾರ, ಸಂಘಸಂಸ್ಥೆಗಳು ಪೌರಕಾರ್ಮಿಕರಿಗೆ ಗರಿಷ್ಠ ಸೌಲಭ್ಯ ಕಲ್ಪಿಸಿ ಕೊಡಬೇಕು’ ಎಂದರು.

ಜೆಸಿಐ ಮೂಡಿಗೆರೆ ಘಟಕದ ಸ್ಥಾಪಕ ಅಧ್ಯಕ್ಷ ಪುಣ್ಯಮೂರ್ತಿ, ವಲಯ ಉಪಾಧ್ಯಕ್ಷ ಜಗತ್, ಕಾರ್ಯದರ್ಶಿ ಸುದೀಪ್ ತ್ರಿಪುರ, ತೇಜಸ್ವಿ, ವಿಜಯಕುಮಾರ್, ಪ್ರೇಮ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-384798854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.