ಮೂಡಿಗೆರೆ: ‘ಇಲ್ಲಿನ ಪಟ್ಟಣ ಪಂಚಾಯಿತಿಗೆ ಸೇರಿದ, ಪರಿಶಿಷ್ಟ ಜಾತಿಯವರಿಗೆ ಮೀಸಲಿಟ್ಟ ವಾಣಿಜ್ಯ ಮಳಿಗೆಯನ್ನು ಬೇರೆಯವರಿಗೆ ನೀಡಿದ್ದ ಅಧಿಕಾರಿಗಳಿಗೆ ₹1 ಲಕ್ಷ ದಂಡ ವಿಧಿಸಿದ್ದಲ್ಲದೆ 1 ತಿಂಗಳಲ್ಲಿ ಫಲಾನುಭವಿಗೆ ಹಸ್ತಾಂತರಿಸಬೇಕು ಎಂದು ಹೈಕೋರ್ಟ್ ತೀರ್ಪು ನೀಡಿದೆ’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಬಿ.ಕೆ. ಲಕ್ಷ್ಮಣ್ ಕುಮಾರ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 6 ವರ್ಷಗಳ ಹಿಂದೆ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆಗ ಪರಿಶಿಷ್ಟ ಜಾತಿ, ಪಂಗಡ ಸಮುದಾಯಕ್ಕೆ ಮೀಸಲಿಟ್ಟ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೊಲೀಸ್ ಠಾಣೆ ಎದುರಿನ ಕಟ್ಟಡದ ಒಂದು ಮಳಿಗೆಯನ್ನು ಹರಾಜಿನಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿ ಪಡೆದುಕೊಂಡಿದ್ದರು. 6 ವರ್ಷವಾದರೂ ಮಳಿಗೆ ಹಸ್ತಾಂತರ ಮಾಡದೆ ಅಧಿಕಾರಿಗಳು ಬೇರೆಯವರಿಗೆ ನೀಡಿದ್ದರು. ಇದನ್ನು ಪ್ರಶ್ನಿಸಿ ಫಲಾನುಭವಿ ಕಾನೂನು ಸಮರ ನಡೆಸಿದ ಫಲವಾಗಿ ಹೈಕೋರ್ಟ್ ಬಡ ದಲಿತರ ಪರವಾಗಿ ತೀರ್ಪು ನೀಡಿದೆ ಎಂದು ವಿವರಿಸಿದರು.

ಬಿ.ಹೊಸಳ್ಳಿ ಗ್ರಾ. ಪಂ. ಸದಸ್ಯ ಶಿವಪ್ರಸಾದ್ ಮಾತನಾಡಿ, ಮೀಸಲು ಕ್ಷೇತ್ರದಲ್ಲಿ ಇಂತಹ ಪ್ರಕರಣ ನಡೆದಿರುವ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಸ್ಥಿತಿ ಉಂಟಾಗಿರುವುದು ನಾಚಿಕೆಗೇಡಿನ ಸಂಗತಿ. ಒಂದು ತಿಂಗಳಲ್ಲಿ ಬಿಡ್ದಾರರಿಗೆ ಮಳಿಗೆ ನೀಡಬೇಕು ಎಂದು ನ್ಯಾಯಾಲಯ ತೀರ್ಪು ನೀಡಿರುವುದು ಸತ್ಯಕ್ಕೆ ನ್ಯಾಯ ಸಿಕ್ಕಿದೆ. ಇನ್ನಾದರೂ ಪಟ್ಟಣ ಪಂಚಾಯಿತಿ ಆಡಳಿತ ವರ್ಗ ಎಚ್ಚೆತ್ತುಕೊಂಡು ಸಂವಿಧಾನ, ಕಾನೂನಿನ ಅನ್ವಯ ಕಾರ್ಯ ನಿರ್ವಹಿಸುವಂತಾಗಬೇಕು ಎಂದರು. ಒಂದು ತಿಂಗಳಲ್ಲಿ ಅರ್ಹ ಫಲಾನುಭವಿಗೆ ಮಳಿಗೆ ನೀಡಬೇಕು ಎಂದು ಆಗ್ರಹಿಸಿದರು.

ಸಿಪಿಐ ತಾಲ್ಲೂಕು ಅಧ್ಯಕ್ಷ ಕೆಳಗೂರು ರಮೇಶ್, ಸಹ ಕಾರ್ಯದರ್ಶಿ ರಾಜು ಬಾನಳ್ಳಿ, ಯುವಜನ ಸಂಘಟನೆ ಮುಖಂಡ ಜಗದೀಶ್ ಚಕ್ರವರ್ತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-126-1355890524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.