ಮೊರಾರ್ಜಿ ಶಾಲೆ ಪ್ರಾಚಾರ್ಯ, ನಿಲಯಪಾಲಕ ಅಮಾನತು

7

ಮೊರಾರ್ಜಿ ಶಾಲೆ ಪ್ರಾಚಾರ್ಯ, ನಿಲಯಪಾಲಕ ಅಮಾನತು

Published:
Updated:

ಚಿಕ್ಕಮಗಳೂರು: ಕರ್ತವ್ಯಲೋಪ, ಅನುದಾನ ದುರ್ಬಳಕೆ ಪ್ರಕರಣದಲ್ಲಿ ತಾಲ್ಲೂಕಿನ ಬೀಕನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಎಚ್‌.ವಿ.ಗಜೇಂದ್ರಮೂರ್ತಿ ಹಾಗೂ ನಿಲಯಪಾಲಕ ಕೆ.ಎಂ.ಮಧುಕುಮಾರ್‌ ಅವರನ್ನು ಅಮಾನತುಗೊಳಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ವಿ.ದೊಡ್ಡಪ್ಪ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇವರಿಬ್ಬರು ಕರ್ತವ್ಯ ಲೋಪ ಮತ್ತು ತಪ್ಪು ಮಾಹಿತಿ ನಮೂದಿಸಿ ಅನುದಾನ ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಈ ಕ್ರಮ ಜರುಗಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅಡುಗೆ ಮನೆ ದುರಸ್ತಿ, ಆಹಾರ ಪದಾರ್ಥ, ವಿದ್ಯಾರ್ಥಿಗಳ ಪ್ರವಾಸ, ವಿದ್ಯಾರ್ಥಿಗಳ ವೈದ್ಯಕೀಯ ಮತ್ತು ಕ್ಷೌರ ಅನುದಾನ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಇವರಿಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಾಗಿದೆ.

ಶಾಲೆಯ ವಿಜ್ಞಾನ ಶಿಕ್ಷಕ ಟಿ.ಕೆ.ಜಗದೀಶಕುಮಾರ್‌ ಅವರಿಗೆ ಪ್ರಭಾರ ಪ್ರಾಚಾರ್ಯರಾಗಿ ಹೊಣೆಗಾರಿಕೆ ವಹಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !