ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿಗೆ ಹೆಚ್ಚಿನ ಆದ್ಯತೆ: ಶಾಸಕ ಸುರೇಶ್

Last Updated 16 ಜುಲೈ 2022, 3:12 IST
ಅಕ್ಷರ ಗಾತ್ರ

ತರೀಕೆರೆ: ಬಿಜೆಪಿ ಸರ್ಕಾರ ಅಭಿವೃದ್ಧಿ ಪರವಾಗಿದ್ದು, ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ತರೀಕೆರೆ ಮತ್ತು ಅಜ್ಜಂಪುರ ಮಂಡಲ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಅಧ್ಯಕ್ಷರು ಪಕ್ಷದ ಬಲ ವರ್ಧನೆಗೆ ಶ್ರಮಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೊಳಿಸಿರುವ ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ನಮ್ಮ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿಯನ್ನು ಜನರ ಮುಂದಿಡಬೇಕುಎಂದರು.

ರಾಷ್ಟ್ರಮಟ್ಟದಲ್ಲಿ ಬುಡಕಟ್ಟು ಮಹಿಳೆಯನ್ನು ಗುರುತಿಸಿ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿಸಿರುವುದು
ಹೆಮ್ಮೆಯ ವಿಚಾರ. ಇದು ಬಿಜೆಪಿ ಸರ್ಕಾರದಲ್ಲಿ ಮಾತ್ರ ಸಾಧ್ಯ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಲ್ಮುರುಡಪ್ಪ ಮಾತನಾಡಿ, ಎಲ್ಲ ವರ್ಗದವರನ್ನು ಗುರುತಿಸಿ ಪಕ್ಷದಲ್ಲಿ ಜವಾಬ್ದಾರಿ ನೀಡಲಾಗುತ್ತಿದೆ. 2023ರಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಮಂಡಲ ಬಿಜೆಪಿ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್ ಮಾತನಾಡಿ, ಶಾಸಕರಿಗೆ ಚ್ಯುತಿ ಬಾರದಂತೆ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷದ ಕೆಲಸ ನಿರ್ವಹಿಸಲಾಗುವುದು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ್‍ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮಾವತಿ ಸಂಜೀವ್‍ಕುಮಾರ್, ನಿರ್ಗಮಿತ ಅಧ್ಯಕ್ಷ ಅಜಯ್‍ಕುಮಾರ್, ಮ್ಯಾಮ್ಕೋಸ್ ನಿರ್ದೇಶಕ ಆರ್.ದೇವಾನಂದ್ ಮಾತನಾಡಿದರು.

ಪಕ್ಷದ ತಾಲ್ಲೂಕು ಉಸ್ತುವಾರಿ ಸೋಮಶೇಖರ್, ಸಿಡಿಸಿಸಿ ಬ್ಯಾಂಕ್ ಉಪಾ ಧ್ಯಕ್ಷ ಟಿ.ಎಲ್. ರಮೇಶ್, ನಿರ್ದೇಶಕ ಕೆ. ಆರ್. ಆನಂದಪ್ಪ, ಜಿಲ್ಲಾ ಉಪಾ ಧ್ಯಕ್ಷೆ ಶಾಂತಾ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ರಾಜ ಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೈತ್ರಶ್ರೀ, ಪುರಸಭೆ ಸದಸ್ಯರಾದ ಅರುಂಧತಿ ಹೆಗ್ಡೆ, ಪವಿತ್ರಾ ವೆಂಕಟೇಶ್, ಶ್ರೇಯಸ್, ಶಿವಮೂರ್ತಿ, ಯುವ ಮೋರ್ಚಾ ಅಧ್ಯಕ್ಷ ಪ್ರತಾಪ್, ಮುಖಂಡ ರಾದ ತಮ್ಮಯ್ಯ, ಡಿ.ಎಸ್‍.ಗಿರೀಶ್, ಗುಳ್ಳದಮನೆ ವಸಂತಕುಮಾರ್, ಮನೋಜ್‍ಕುಮಾರ್, ಅಶ್ವತ್ಥ್‌ ರೆಡ್ಡಿ, ರಾಜಶೇಖರ್, ರೇಣುಕಪ್ಪ, ಸಂದೀಪ್, ಟಿ.ಜಿ.ಸದಾನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT