ಮೂಡಿಗೆರೆ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬಾಳೂರು ಗ್ರಾಮದಲ್ಲಿ ನಡೆದಿದೆ.

ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳೀಯ ಕಾರ್ಮಿಕರು ಸಮಾಜಸೇವಕ ಬಣಕಲ್ ಆರೀಫ್ ಅವರ ಅಂಬುಲೆನ್ಸ್ಗೆ ಕರೆ ಮಾಡಿದ್ದಾರೆ.

ಸ್ಥಳಕ್ಕೆ ಬಂದ ಆರೀಫ್ ಮಹಿಳೆಯನ್ನು ತಮ್ಮ ಅಂಬುಲೆನ್ಸ್ ಮೂಲಕ ಎಂಜಿಎಂ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಈ ವೇಳೆ ಹೆರಿಗೆ ನೋವು ತೀವ್ರವಾಗಿದ್ದರಿಂದ ರಸ್ತೆ ಬದಿ ಅಂಬುಲೆನ್ಸ್ ನಿಲ್ಲಿಸಿದ್ದು, ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದು, ಪಟ್ಟಣದ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮಾಜ ಸೇವಕ ಆರೀಫ್ ಅವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.