ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಕಂಪದ ನೌಕರಿಗೆ ಶಿಫಾರಸು ಮಾಡಲು ಲಂಚ: ಮೂಡಿಗೆರೆ BEO ಲೋಕಾಯುಕ್ತ ಬಲೆಗೆ

Published 27 ಡಿಸೆಂಬರ್ 2023, 8:30 IST
Last Updated 27 ಡಿಸೆಂಬರ್ 2023, 8:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಅನುಕಂಪದ ಆಧಾರದ ನೌಕರಿಗೆ ಶಿಫಾರಸು ಮಾಡಲು ₹10 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಮೂಡಿಗೆರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತರಾಜ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಹೊಯ್ಸಳಲು ಗ್ರಾಮದಲ್ಲಿ ಸಹ ಶಿಕ್ಷಕರಾಗಿದ್ದ ಚಿಕ್ಕಮಗಳೂರಿನ ತೇಗೂರು ಗ್ರಾಮದ ರಜನಿಕಾಂತ್ ಏಳು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಪತ್ನಿ ಲತಾಮಣಿ ಅನುಕಂಪದ ನೌಕರಿಗೆ ಅರ್ಜಿ ಸಲ್ಲಿಸಿದ್ದು, ಇದನ್ನು ಮೇಲಾಧಿಕಾರಿಗೆ ಶಿಫಾರಸು ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿ ಅವರಲ್ಲಿ ಲತಾಮಣಿ ಮನವಿ ಮಾಡಿದ್ದರು.

'ದ್ವಿತೀಯ ದರ್ಜೆ ಸಹಾಯಕ ಬಷೀರ್ ಅಹಮದ್ ಮೂಲಕ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಡಿಮೆ ಮಾಡಿಕೊಳ್ಳುವಂತೆ ಬಿಇಒ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅದಕ್ಕೆ ಅವರು ಒಪ್ಪಿದ್ದಾರೆ. ಸಂಭಾಷಣೆಯ ಆಡಿಯೊ ಕೂಡ ಇದೆ' ಎಂದು ಲತಾಮಣಿ ಲೋಕಾಯುಕ್ತ ಅಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಬುಧವಾರ ₹10 ಸಾವಿರ ಲಂಚ ಪಡೆಯುವಾಗ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT