ಮೂಡಿಗೆರೆ ಕಾಂಗ್ರೆಸ್ ಸಭೆಯಲ್ಲಿ ಅಸಮಾಧಾನ, ಗದ್ದಲ

ಚಿಕ್ಕಮಗಳೂರು: ಮೂಡಿಗೆರೆ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಗದ್ದಲ ನಡೆದಿದೆ. ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಫೂರ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ ಸಭೆಯಲ್ಲಿ ಇದ್ದರು. ಪಕ್ಷದ ಎಂ.ಎಲ್.ಅಭಿಜಿತ್, ಅಶೋಕ್ ಆಲ್ದೂರು ಮೊದಲಾವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಮುಂಬರುವ ವಿಧಾನಸಭೆ ಚುನಾವಣೆಗೆ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕುರಿತು ಪಕ್ಷದ ಅಭಿಪ್ರಾಯ ಸಂಗ್ರಹ ಸಭೆ ನಡೆಯಿತು. ಆ ಪಟ್ಟಿಯಲ್ಲಿ ಕೆಲ ಮುಖಂಡರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆವು, ಹೊಸದಾದ ಪಟ್ಟಿ ಮಾಡಿಕೊಂಡಿದ್ದಾರೆ’ ಎಂದು ಅಭಿಜಿತ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ನಯನಾ ಮೋಟಮ್ಮ ವಿರುದ್ಧವಾಗಿರುವ ಮುಖಂಡರ ಹೆಸರುಗಳನ್ನು ಪಟ್ಟಿಯಲ್ಲಿ ಕೈಬಿಟ್ಟಿದ್ದರು. ನಯನಾ ಅವರಿಗೆ ಟಿಕೆಟ್ ನೀಡಬಾರದು ಎಂದು ಮನವಿ ಮಾಡಿದ್ದೇವೆ’ ಎಂದು ಅವರು ತಿಳಿಸಿದರು.
‘ಸಭೆಯಲ್ಲಿ ಕೆಲವರು ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅವರ ಗೊಂದಲಗಳನ್ನು ಆಲಿಸಿ, ಪರಿಹರಿಸಿದ್ದೇವೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಂಶುಮಂತ್ ತಿಳಿಸಿದರು.
ಟಿಕೆಟ್‌ಗೆ 6 ಮಂದಿ ಅರ್ಜಿ ಸಲ್ಲಿಕೆ: ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ನಯನಾಮೋಟಮ್ಮ, ಎನ್.ಆರ್.ನಾಗರತ್ನ, ಹೂವಪ್ಪ, ಪ್ರಭಾಕರ್ ಬಿನ್ನಾಡಿ, ಕೆ.ಎಂ.ಶ್ರೀರಂಗಯ್ಯ, ಪವನ್‌ಕಿಶೋರ್ ಅರ್ಜಿ ಸಲ್ಲಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.