ಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಣ್ಣ ರೈತರು ನಮೂನೆ 53ರಲ್ಲಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ.ಪಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಮೂರು ಸಲ ಶಾಸಕನಾಗಿ, ರೈತರ ಪರವಾಗಿ ಸದನದೊಳಗೆ ಹಾಗೂ ಹೊರಗೆ ಧ್ವನಿ ಎತ್ತಿದ್ದೇನೆ. ರೈತರ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರದ ಮಟ್ಟದಲ್ಲಿ ಇತ್ಯರ್ಥ ಪಡಿಸಿದ್ದೇನೆ. ನನ್ನ ಅವಧಿಯಲ್ಲಿ ರೈತರಿಗೆ ಯಾವುದೇ ಸಮಸ್ಯೆ ನೀಡಿಲ್ಲ. 2013ರಲ್ಲಿ ಫಾರಂ 53ರಲ್ಲಿ 600 ಅರ್ಜಿಗಳು ಬಂದಿದ್ದವು. ಆ ಅರ್ಜಿಗಳನ್ನು ಇತ್ಯರ್ಥಪಡಿಸದೆ ವಜಾ ಮಾಡಲಾಗಿತ್ತು. 3ನೇ ಬಾರಿಗೆ ಶಾಸಕನಾಗಿದ್ದಾಗ ವಜಾಗೊಂಡಿದ್ದ 600 ಅರ್ಜಿಗಳನ್ನು ಪರಿಶೀಲಿಸಿ, ಅವುಗಳಲ್ಲಿ ಕೆಲವನ್ನು ಇತ್ಯರ್ಥಪಡಿಸಿ ರೈತರಿಗೆ ಸಾಗುವಳಿ ಚೀಟಿ ಒದಗಿಸಲಾಗಿತ್ತು. ಕೆಲವು ಅರ್ಜಿಗಳು ಬಾಕಿ ಉಳಿದಿದ್ದವು. 2023ರಲ್ಲಿ ಮತ್ತೆ 600 ಅರ್ಜಿಗಳು ಅಕ್ರಮ-ಸಕ್ರಮ ಸಮಿತಿಯ ಮುಂದೆ ಬಂದಿದ್ದವು. ಅದನ್ನು ವಜಾ ಮಾಡಲಾಗಿದೆ’ ಎಂದು ಆರೋಪಿಸಿದರು.

‘ನನ್ನ ಅವಧಿಯಲ್ಲಿ ಅಕ್ರಮ-ಸಕ್ರಮ ಸಮಿತಿ ಮೂಲಕ ಇತ್ಯರ್ಥ ಪಡಿಸಿದ್ದ ಜಾಗದ ಸಾಗುವಳಿ ಚೀಟಿಯನ್ನು ರೈತರಿಗೆ ಹಸ್ತಾಂತರಿಸಲು ಕೆಲ ಅಧಿಕಾರಿಗಳು ರೈತರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಹ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿ, ಸಾಗುವಳಿ ಚೀಟಿ ನೀಡುವ ವ್ಯವಸ್ಥೆ ಮಾಡಿದ್ದೆ. ಕೆಲವು ಅಧಿಕಾರಿಗಳು ನಕಲಿ ಪಹಣಿ ತಯಾರಿಸಿದ್ದರು. ಕೆಲವು ಅರ್ಜಿಗಳು ಅಕ್ರಮವಿರಬಹುದು. ಅವುಗಳನ್ನು ಪರಿಶೀಲಿಸಿ ನ್ಯಾಯಬದ್ಧ ಅರ್ಜಿಗಳನ್ನು ಇತ್ಯರ್ಥ ಪಡಿಸಬೇಕು. ರೈತರಿಗೆ ಸುಖಾಸುಮ್ಮನೆ ತೊಂದರೆ ನೀಡುವುದು ಸರಿಯಲ್ಲ. ಕಳಸ ಹಾಗೂ ಮೂಡಿಗೆರೆ ಭಾಗದಲ್ಲಿ ರೈತರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಲು ಪ್ರಯತ್ನಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-126-1770807777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.