ಮೂಡಿಗೆರೆ: ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಭಾನುವಾರ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಬಿಜೆಪಿ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅಶ್ವಿನಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಮುಖಂಡ ಎಂ.ಆರ್. ಜಗದೀಶ್ ಮಾತನಾಡಿ, ರಾಜ್ಯ ಸರ್ಕಾರ ಪೊಲೀಸರ ಮೂಲಕ ಹಿಂದೂ ಕಾರ್ಯಕರ್ತರ ಮೇಲೆ ಸುಖಾಸುಮ್ಮನೆ ಸುಳ್ಳು ಪ್ರಕರಣ ದಾಖಲಿಸುತ್ತಿದೆ. ಕೆಲವು ಮುಸ್ಲಿಮರಿಂದ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಅನ್ಯ ಧರ್ಮದ ಶಕ್ತಿಗಳು ಅಪ್ರಾಪ್ತ ಬಾಲಕರಿಂದ ಹಿಂದೂ ಹುಡುಗಿಯರ ಮೇಲೆ ಲವ್ ಜಿಹಾದ್ ಮಾಡಲು ಆರಂಭಿಸಿದ್ದಾರೆ. ಇದಕ್ಕೆ ಈಚೆಗೆ ತಾಲ್ಲೂಕಿನ ಬಿಳಗುಳದಲ್ಲಿ ನಡೆದ ಪ್ರಕರಣವೇ ಸಾಕ್ಷಿ. ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಮಾತನಾಡಿ, ಅಕ್ರಮ ಗೋಸಾಗಾಟ ಎಗ್ಗಿಲ್ಲದಂತೆ ನಡೆಯುತ್ತಿದೆ. ಬಾಂಗ್ಲಾ ವಲಸಿಗರಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಹಿಂದೂ ಅಪ್ರಾಪ್ತ ವಯಸ್ಸುನ ಬಾಲಕಿಯನ್ನು ಒಲಿಸಿಕೊಂಡು ಲವ್ ಜಿಹಾದ್ ಮಾಡುತ್ತಿರುವುದನ್ನು ತಡೆಗಟ್ಟಿ ಆಕೆಯನ್ನು ರಕ್ಷಿಸಲು ಹೋದ ಹಿಂದೂ ಸಂಘಟನೆ ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿರುವುದು ಖಂಡನೀಯ. ಹಿಂದೂ ಸಂಘಟಕರ ವಿರುದ್ಧ ಹಾಕಿದ ಸುಳ್ಳು ಪ್ರಕರಣಗಳನ್ನು ಕೂಡಲೇ ವಾಪಾಸ್ ಪಡೆಯಬೇಕು. ಅಕ್ರಮ ಬಾಂಗ್ಲಾ ವಲಸಿಗರನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆ ಬೇಲೂರು ರಸ್ತೆ, ಎಂ.ಜಿ.ರಸ್ತೆ, ಕೆ.ಎಂ.ರಸ್ತೆ ಮೂಲಕ ಸಾಗಿ ಲಯನ್ಸ್ ವೃತ್ತದಲ್ಲಿ ಸಮಾವೇಶಗೊಂಡು ಬಹಿರಂಗ ಸಭೆ ನಡೆಯಿತು. ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಕೆ.ಸಿ. ರತನ್, ಪಂಚಾಕ್ಷರಿ, ಎಂ.ಎಸ್. ಸುಜಿತ್, ಧನಿಕ್ ಕೋಡದಿಣ್ಣೆ, ಜಿ.ಎಸ್. ಸುದೇವ್ ಗುತ್ತಿ, ಪ್ರಶಾಂತ್ ಬಿಳಗುಳ, ಕಲ್ಲೇಶ್, ಪರೀಕ್ಷಿತ್, ಆದರ್ಶ್ ಕನ್ನಳ್ಳಿ, ಯತೀಶ್ ಕೂಡುವಳ್ಳಿ, ಸಂದೀಪ್ ಕೆಲ್ಲೂರು, ಪುಟ್ಟಮ್ಮ, ಸುಶೀಲಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-126-1383085704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.