ಮೂಡಿಗೆರೆ: ಹಳೇಕೋಟೆ ಗ್ರಾಮದಲ್ಲಿ 2019ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್ ನ್ಯಾಯಾಲಯವು ಆರೋಪಿ ಸುರೇಶ್ ಎಂಬಾತನಿಗೆ ಮೂರು ವರ್ಷ ಜೈಲು ಶಿಕ್ಷೆ, ₹10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೆಕಲ್ ತಾಲ್ಲೂಕಿನ ಚಂದಾಪುರ ಗ್ರಾಮದವರಾದ ಸುರೇಶ್, ಹಳೇಕೋಟೆ ಗ್ರಾಮದ ಮನೆಯೊಂದರ ಹಿಂಬಾಗಿಲನ್ನು ಮುರಿದು, ಮನೆಯಲ್ಲಿದ್ದ ₹4 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದನು. ಈ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಜಗನ್ನಾಥ್ ನೇತೃತ್ವದಲ್ಲಿ ಆರೋಪಿಯನ್ನು ಪತ್ತೆಹಚ್ಚಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಸುರೇಶ್ ಅಪರಾಧಿಯೆಂದು ಘೋಷಿಸಿ, ದಂಡ ಹಾಗೂ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ. ಸಹಾಯಕ ಸರ್ಕಾರಿ ಅಭಿಯೋಜಕಿ ಟಿ.ರೂಪ ವಾದ ಮಂಡಿಸಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀನಾಥ್ ರೆಡ್ಡಿ, ಸಿಬ್ಬಂದಿ ಎಚ್.ಎಲ್. ಸಂತೋಷ್ ಕುಮಾರ್, ಎಸ್.ಜಿ. ಜಗದೀಶ್, ಮಹೇಂದ್ರ ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.