ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೇಶನ ರಹಿತರ ಅನಿರ್ದಿಷ್ಟ ಧರಣಿ ಹಿಂದಕ್ಕೆ

ನಿವೇಶನ: ಜಾಗದ ಗಡಿಗುರುತು ಮಾಡಲು ಸಿದ್ಧತೆ
Last Updated 24 ನವೆಂಬರ್ 2022, 2:49 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ನಿವೇಶನ ರಹಿತರ ಹೋರಾಟ ಸಮಿತಿಯಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ ತಿಳಿಸಿದರು.

‘ತಾಲ್ಲೂಕಿನ ಹಳೆಮೂಡಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೋದಯನಗರದ ಸರ್ವೆ ನಂಬರ್ 7ರಲ್ಲಿ ನಿವೇಶನಕ್ಕಾಗಿ ಕಾಯ್ದಿರಿಸಿದ್ದ 4.24 ಎಕರೆ ಜಾಗವನ್ನು ಕಂದಾಯ ಇಲಾಖೆ ಬುಧವಾರ ಸರ್ವೆ ನಡೆಸಿ ಗಡಿ ಗುರುತು ಮಾಡುವ ಕಾರ್ಯಕ್ಕೆ ಮುಂದಾದ ಹಿನ್ನೆಲೆಯಲ್ಲಿ ಧರಣಿಯನ್ನು ಕೈ ಬಿಡಲಾಯಿತು.

ನಿವೇಶನ ರಹಿತರಿಗೆ ಮಂಜೂರಾಗಿರುವ ಸರ್ಕಾರಿ ಜಾಗವನ್ನು ನಿವೇಶನಕ್ಕಾಗಿ ಗಡಿ ಗುರುತು ಮಾಡದೇ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ತೋರಿತ್ತು. ಈ ಹಿನ್ನಲೆಯಲ್ಲಿ ವಸತಿಗಾಗಿ ಹೋರಾಟ ಸಮಿತಿ ವತಿಯಿಂದ ಬುಧವಾರ ತಾಲ್ಲೂಕು ಕಚೇರಿ ಎದುರು ಅನಿರ್ಧಿಷ್ಟಾವದಿ ಧರಣಿಗೆ ತಯಾರಿ ಮಾಡಿಕೊಳ್ಳಲಾಗಿತ್ತು. ಬುಧವಾರ ತಾಲ್ಲೂಕು ಆಡಳಿತ ಗಡಿ ಗುರುತು ಮಾಡಲು ಮುಂದಾಗಿದೆ. ತಹಶೀಲ್ದಾರರು ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ಧರಣಿ ಹಿಂಪಡೆದಿದ್ದು, ಸೋಮವಾರ ಬಗೆಹರಿಸದಿದ್ದರೆ ಮತ್ತೆ ಧರಣಿ ಪ್ರಾರಂಭಿಸಲಾಗುವುದು’ ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT