ಮೂಡಿಗೆರೆ: ಶಾಸಕಿ ನಯನಾ ಮೋಟಮ್ಮ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ದೊರಕಲೆಂದು ಮಂಗಳವಾರ ದೇವರಮನೆಯ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬಣಕಲ್ ಹೋಬಳಿ ಅಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ, ‘ಜಿಲ್ಲೆಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಲು ಶಾಸಕಿ ನಯನಾ ಮೋಟಮ್ಮ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ದೊರಕಿದರೆ ಅನುಕೂಲವಾಗುತ್ತದೆ. ಕಳೆದ 3 ಅವಧಿಯಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ನಯನಾ ಮೋಟಮ್ಮ ಅವರು, ತನ್ನ ಶಕ್ತಿ ಮೀರಿ ಪಕ್ಷ ಸಂಘಟನೆ ಮಾಡಿದ್ದರ ಫಲವಾಗಿ ಮೂಡಿಗೆರೆಯಲ್ಲಿ ಶಾಸಕ ಸ್ಥಾನ ಗಿಟ್ಟಿಸಿಕೊಳ್ಳಲು ಸಾಧ್ಯವಾಗಿದೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ಸಿಗಬೇಕು’ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಸಿ.ಎಸ್. ವಿನಯ್ಕುಮಾರ್ ಮಾತನಾಡಿ, ‘ನಯನಾ ಮೋಟಮ್ಮ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಉತ್ತಮ ಶಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಮಹಿಳಾ ನಾಯಕತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಲೆನಾಡು ಭಾಗಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮನೋಜ್ ಬೆಟ್ಟಗೆರೆ, ಗ್ಯಾರಂಟಿ ಸಮಿತಿ ಸದಸ್ಯ ಅರುಣ್ ಗುತ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-664709224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.