ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ ರೋಟರಿ ಸಂಸ್ಥೆಗೆ ಪ್ರಶಸ್ತಿಗಳ ಗರಿ

Published 28 ನವೆಂಬರ್ 2023, 14:09 IST
Last Updated 28 ನವೆಂಬರ್ 2023, 14:09 IST
ಅಕ್ಷರ ಗಾತ್ರ

ಮೂಡಿಗೆರೆ: ಇಲ್ಲಿನ ರೋಟರಿ ಸಂಸ್ಥೆಯು ಜಿಲ್ಲಾ ಮಟ್ಟದಲ್ಲಿ 8 ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ಇತ್ತೀಚೆಗೆ ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ನಡೆದ ರೋಟರಿ ಜಿಲ್ಲೆ-3180ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಡಿಗೆರೆ ಘಟಕವು ಪ್ರಶಸ್ತಿಗಳನ್ನು ಸ್ವೀಕರಿಸಿದೆ.

2022-23ನೇ ಸಾಲಿನ ರೋಟರಿ ಜಿಲ್ಲಾ ಗವರ್ನರ್‌ ಜಯಗೌರಿ ಅವರು ಜಿಲ್ಲೆಯ ವಿವಿಧ ರೋಟರಿ ಕ್ಲಬ್‌ಗಳಿಗೆ ಪ್ರಶಸ್ತಿ ವಿತರಿಸಿದರು.

ಮೂಡಿಗೆರೆ ರೋಟರಿ ಸಂಸ್ಥೆಯ ಪರವಾಗಿ 2022-23ನೇ ಸಾಲಿನ ಅಧ್ಯಕ್ಷ ಎಚ್.ಆರ್.ಪ್ರದೀಪ್ ಕುಮಾರ್ ಮತ್ತು ವರುಣ್ ಬಿ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ವೃತ್ತಿ ಮಾರ್ಗದರ್ಶನ, ಪರಿಸರ, ಆರೋಗ್ಯ, ಶಿಕ್ಷಣ, ಜಲಸಂರಕ್ಷಣೆ ಹೀಗೆ ಒಟ್ಟು 8 ವಿಭಾಗಗಳಲ್ಲಿ ಮೂಡಿಗೆರೆ ಘಟಕವು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ರೋಟರಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಗಳನ್ನು ಗಳಿಸಿದೆ.

ಕಳೆದ ಸಾಲಿನ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಬಿ.ಎನ್. ಓಂಕಾರ್, ಪ್ರಸ್ತುತ ಸಾಲಿನ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ವಿನೋದ್ ಕುಮಾರ್ ಶೆಟ್ಟಿ, ಮೂಡಿಗೆರೆ ರೋಟರಿ ಹಾಲಿ ಅಧ್ಯಕ್ಷ ಕೆ.ಎಲ್.ಎಸ್. ತೇಜಸ್ವಿ, ನಿಯೋಜಿತ ಅಧ್ಯಕ್ಷ ನರೇಂದ್ರ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT